ರಾಜಕೀಯರಾಜ್ಯಸ್ಥಳೀಯ ಸುದ್ದಿಹುಬ್ಬಳ್ಳಿ
ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: “ಸಂಗಮ”ವೆ ಸಾಕ್ಷಿ!
Power city news ಹುಬ್ಬಳ್ಳಿ:
ಲಾಡ್ಜ್ನಲ್ಲಿ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ ಚೆನ್ನಮ್ಮ ವೃತ್ತದ ಬಳಿಯ ಸಂಗಮ ಲಾಡ್ಜ್ನಲ್ಲಿ
ಕಲಘಟಗಿ ತಾಲೂಕಿನ ಕಂಪ್ಲಿಕೊಪ್ಪ ಗ್ರಾಮದ ಸಂತೋಷ ಹರಿಜನ ಎಂಬ ಯುವಕ ನೇಣು ಬಿಗಿದು, ಬೆಡ್ ಮೇಲೆ ಕುಳಿತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಮೃತ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ನ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಯುವಕನ ಸಾವಿನ ಕುರಿತು ಪೊಲಿಸರು ತನಿಖೆ ಮುಂದುವರೆಸಿದ್ದಾರೆ.