ಸ್ಥಳೀಯ ಸುದ್ದಿ
ಪತ್ರಕರ್ತನ ಬಂಧನಕ್ಕೆ ಖಂಡನೆ- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿಭಟನೆ
ಧಾರವಾಡ
ಬಿಟಿವಿಯ ಹಿರಿಯ ವರದಿಗಾರ ಮೆಹಬೂಬ ಮುನವಳ್ಳಿ ಬಂಧನ ಖಂಡಿಸಿ ಇಂದು ಹುಬ್ಬಳ್ಳಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ, ತಹಶಿಲ್ದಾರ ಅವರಿಗೆ ಮನವಿ ಸಲ್ಲಿಸಿದ್ರು.
ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಲೋಚನೇಶ ಹೂಗಾರ ನೇತೃತ್ವದಲ್ಲಿ ಪದಾಧಿಕಾರಿಗಳು ಈ ಪ್ರತಿಭಟನೆ ನಡೆಸಿದ್ರು.
ನಗರದಲ್ಲಿ ಪಾದಯಾತ್ರೆ ಮೂಲಕ ಪ್ರತಿಭಟನೆ ಸಾಗಿ,
ಪ್ರಜಾಪ್ರಭುತ್ವದ 4 ನೇ ಅಂಗವಾದ ಮಾಧ್ಯಮ ರಂಗದಲ್ಲಿರುವವರನ್ನು ಪೊಲೀಸರು ಬಂಧನ ಮಾಡುತ್ತಿರುವುದು ಖಂಡನೀಯ. ಇದರಿಂದ ಪತ್ರಕರ್ತರ ಹಕ್ಕು ಕಸಿದುಕೊಂಡಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂದು ನಡೆದ ಈ ಪ್ರತಿಭಟನೆಯಲ್ಲಿ
ದಾವಣಗೇರಿ ಪೊಲೀಸ್ ಅಧಿಕಾರಿಗಳ ಮೇಲೆ ಕಾನೂನು ಕ್ರಮಕ್ಕಾಗಿ ಹಾಗೂ ಹಿರಿಯ ಪತ್ರಕರ್ತ ಮೆಹಬೂಬ ಮುನವಳ್ಳಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಲಾಯಿತು.
ತಹಶಿಲ್ದಾರ ಮುಖಾಂತರ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಭಾಗಿಯಾಗಿದ್ದರು.