ಸ್ಥಳೀಯ ಸುದ್ದಿ
ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಹಲವರಿಗೆ ಗಾಯ
ಧಾರವಾಡ
ಬೆಳಗಾವಿ ಸುವರ್ಣ ಸೌಧದ ಎದುರು ಪ್ರತಿಭಟನೆ ನಡೆಸಲೆಂದು ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರಿದ್ದ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಸಮೀಪದ ಇಂದು ಬಳಗಿಜಾವ ನಡೆದಿದೆ
ಬಳ್ಳಾರಿಯಿಂದ ಅನೇಕ ಜನ ಅಂಗನವಾಡಿ ಕಾರ್ಯಕರ್ತೆಯರು ಬಸ್ ಮೂಲಕ ಬೆಳಗಾವಿ ಸುವರ್ಣಸೌಧಕ್ಕೆ ಪ್ರತಿಭಟನೆ ನಡೆಸಲೆಂದು ಹೊರಟಿದ್ದ ವೇಳೆ ತೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದಿದೆ . ಇದರಿಂದಾಗಿ ಆರೇಳು ಜನ ಅಂಗನವಾಡಿ ಕಾರ್ಯಕರ್ತೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೆಲ ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆಯ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.