ಸ್ಥಳೀಯ ಸುದ್ದಿ
ಮಕ್ಕಳ ತಜ್ಞವೈದ್ಯ ಡಾ.ರಾಜನ್ ದೇಶಪಾಂಡೆಗೆ ಸಿಕ್ಕ ಗೌರವ ಡಾಕ್ಟರೇಟ್ ಪದವಿ
ಧಾರವಾಡ
ಹಿರಿಯರು ಮಾರ್ಗದರ್ಶಕರು ನಾಡಿನ ಖ್ಯಾತ ಮಕ್ಕಳ ತಜ್ಞರು ಹಾಗೂ ಗಣ್ಯರು, ರೋಟರಿ ಕ್ಲಬ್ ಮೂಲಕ ಹಲವಾರು ಅಭಿವೃದ್ಧಿ ಕಾರ್ಯಗಳ ರೂಪಿಸಿ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ ಡಾ ರಾಜನ್ ದೇಶಪಾಂಡೆ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರದ ರಾಜೀವಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಘೋಷಣೆ ಆಗಿದೆ.
ರಾಜ್ಯಪಾಲರ ಅನುಮೋದನೆಯೊಂದಿಗೆ ನೀಡುವ ಗೌರವ ಡಾಕ್ಟರೇಟ್ ಇವರಿಗೆ ಸಿಕ್ಕಿದಕ್ಕೆ, ಪಾಲಿಕೆ ಸದಸ್ಯರಾದ ಈರೇಶ ಅಂಚಟಗೇರಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.