ಸ್ಥಳೀಯ ಸುದ್ದಿ
ಮಹಾನಗರದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಬೈಕ್ ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಬೆಂಗಳೂರು: ಮಹಾನಗರದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರಿದಂತೆ ಕಾಣುತ್ತದೆ. ದಿನವೂ ಒಂದಿಲ್ಲೊಂದು ಅಪರಾಧ ಕೃತ್ಯಗಳು ನಡೆಯುತ್ತಲೇ ಇದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಹೌದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವಸಂತನಗರದಲ್ಲಿ ಬೆಳಗಿನ ಜಾವ 5 ಗಂಟೆ ವೇಳೆಗೆ ನಡೆದಿದೆ.
ಇನ್ನು ಮೂವರು ಕಿಡಿಗೇಡಿಗಳು ಸೇರಿ ಬೆಂಕಿ ಹಚ್ಚಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆ ಕುರಿತು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.