ಸ್ಥಳೀಯ ಸುದ್ದಿ
ಸಿಎಂ ಬಸವರಾಜ ಬೊಮ್ಮಾಯಿಗೆ ಶ್ರೀ ಮೃತ್ಯುಂಜಯ ಮಹಾಂತ ಪ್ರಶಸ್ತಿ ಪ್ರಧಾನ
ಧಾರವಾಡ
ಧಾರವಾಡದ ಪ್ರಸಿದ್ಧ ಮುರುಘಾಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರತಿವರ್ಷ ಕೊಡಲಾಗು ಮೃತ್ಯುಂಜಯ ಮಹಾಂತ ಪ್ರಶಸ್ತಿಯನ್ನು ಪ್ರಸಕ್ತ ವರ್ಷ ನಾಡದೊರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರದಾನ ಮಾಡಿ ಗೌರವಿಸಲಾಗಿದೆ.
ಹುಬ್ಬಳ್ಳಿಯಿಂದ ಮುರುಘಾಮಠಕ್ಕೆ ಬಂದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಮುರುಘೇಂದ್ರ ಮಹಾಸ್ವಾಮೀಜಿಗಳ ಕರ್ತೃ ಗದ್ದುಗೆಗೆ ನಮಸ್ಕರಿಸಿ ಕಾರ್ಯಕ್ರಮಕ್ಕೆ ಆಗಮಿಸಿದರು.
ಈ ವೇಳೆ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಶ್ರೀಮಠದ ಸದಸ್ಯರು ಸಿಎಂ ಬೊಮ್ಮಾಯಿ ಅವರಿಗೆ ಮೃತ್ಯುಂಜಯ ಮಹಾಂತ ಪ್ರಶಸ್ತಿ ನೀಡಿ ಗೌರವಿಸಿದರು.