BREAKING NEWSDHARWADHubballiJDSಧಾರವಾಡರಾಜಕೀಯರಾಜ್ಯಸ್ಥಳೀಯ ಸುದ್ದಿಹುಬ್ಬಳ್ಳಿ
ಆಪರೇಷನ್ ಕಮಲ ಹೊಸತೇನಲ್ಲ- ಸಚಿವ ಲಾಡ್!
Dakani

PowerCityNews Hubli : ಹುಬ್ಬಳ್ಳಿ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವವರೆಗೆ ಅವರು ರಾಜ್ಯ ಸರ್ಕಾರಗಳನ್ನು ಉರುಳಿಸುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅವರು ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆಸಿರುವುದರಲ್ಲಿ ಹೊಸತೇನಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಬಿಜೆಪಿಯವರು 50 ಕೋಟಿ ಆಫರ್ ಮಾಡಿದ್ದಾರೆಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಯಲ್ಲಿ ತಪ್ಪೇನಿಲ್ಲ. ನಮ್ಮ ಶಾಸಕರ ಸಂಖ್ಯೆ ಜಾಸ್ತಿ ಇದೆ. ಹಾಗಾಗಿ ಅವರಿಗೆ ಕಷ್ಟವಾಗಿದೆ. ಆದರೂ ಪ್ರಯತ್ನ ಮಾಡುತ್ತಿದ್ದಾರೆ. ಈ ಹಿಂದೆ ಕರ್ನಾಟಕ, ಮಹಾರಾಷ್ಟ್ರ, ಗೋವಾ, ಮಧ್ಯಪ್ರದೇಶ ದಲ್ಲಿ ಬಿಜೆಪಿಯವರು ಆಪರೇಷನ್ ಕಮಲ ನಡೆಸಿದ್ದಾರೆ ಎಂದರು.
ಕೋವಿಡ್ ಸಂದರ್ಭದಲ್ಲಿ ಅಕ್ರಮ ನಡೆದಿದೆ ಎಂದು ಬಿಜೆಪಿ ಶಾಸಕ ಯತ್ನಾಳ ಅವರೇ ಹೇಳಿದ್ದಾರೆ. ನಾವೇನೂ ದ್ವೇಷ ರಾಜರಾಕಣ ಮಾಡುತ್ತಿಲ್ಲ ಎಂದರು.