ಕ್ರಿಕೆಟ್ ಆಟದ ವೇಳೆ ಆಟಗಾರರ ಡಿಕ್ಕಿ – ಓರ್ವನ ಸ್ಥಿತಿ ಚಿಂತಾಜನಕ..!
ಹುಬ್ಬಳ್ಳಿ
ಕ್ರಿಕೆಟ್ ಆಡುವ ವೇಳೆ ಪರಸ್ಪರ ಡಿಕ್ಕಿಯಾಗಿ, ಆಟಗಾರರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ರಾಜನಗರದ ಮೈದಾನ ದಲ್ಲಿ ನಡೆಯುತ್ತಿರುವ ಮೊದಲ ಡಿವಿಷನ್ ಕ್ರಿಕೆಟ್ ಟೂರ್ನಿಯ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಇಬ್ಬರು ಆಟಗಾರರು ಪರಸ್ಪರ ಡಿಕ್ಕಿ ಹೊಡೆದಿದ್ದರಿಂದ ಈ ಘಟನೆ ನಡೆದಿದೆ, ಗಂಭೀರವಾಗಿ ಗಾಯಗೊಂಡ ಆಟಗಾರ ಎಸ್ಡಿಎಂ ಬಿ ತಂಡದ ಪ್ರಜ್ವಲ್ ಶಿರೋಳ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಕ್ರಿಕೆಟ್ ಅಕಾಡೆಮಿ ಎ ಹಾಗೂ ಧಾರವಾಡದ ಎಸ್ಡಿಎಂ ಬಿ ತಂಡಗಳ ನಡುವೆ ಪಂದ್ಯದ ನಡೆದ ವೇಳೆ ಘಟನೆ ಸಂಭಸಿವಿದೆ. 19 ನೇ ಓವರ್ನಲ್ಲಿ ಫೀಲ್ಡಿಂಗ್ ಮಾಡುವಾಗ ಕವರ್ಸ್ ಹಾಗೂ ಪಾಯಿಂಟ್ ಕ್ಷೇತ್ರದ ನಡುವೆ ಎಸ್ಡಿಎಂ ಬಿ ತಂಡದ ಪ್ರಜ್ವಲ್ ಶಿರೋಳ ಮತ್ತು ಪ್ರಜ್ವಲ್ ಬೋರಣ್ಣನವರ ಡಿಕ್ಕಿಯಾಗಿ, ಪ್ರಜ್ವಲ್ ಶಿರೋಳ ಪ್ರಜ್ಞಾಹೀನನಾಗಿ ಮೈದಾನದಲ್ಲಿ ಕುಸಿದು ಬಿದ್ದಿದ್ದ. ತಕ್ಷಣವೇ ಕೆಎಸ್ಸಿಎ ಕ್ಲಬ್ನ ಸದಸ್ಯರು , ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ, ಕೆಲ ಸಮಯದಲ್ಲಿಯೇ ಸ್ಕ್ಯಾನಿಂಗ್ ಮಾಡಿದಾಗ ಮಿದುಳಿಗೆ ಬಲವಾಗಿ ಪೆಟ್ಟು ಬಿದ್ದಿದ್ದು ದೃಢಪಟ್ಟಿತ್ತು, ತಕ್ಷಣವೇ ಶಸ್ತ್ರ ಚಿಕಿತ್ಸೆ ಮಾಡಬೇಕು ಎಂದು ವೈದ್ಯರು ತಿಳಿಸಿದ್ದಾರೆ.ಈ ಕುರಿತು ಮಾತನಾಡಿದ ಕೆಎಸ್ಸಿಎ ಧಾರವಾಡ ವಲಯದ ಚೇರ್ಮನ್ ವೀರಣ್ಣ ಸವಡಿ ಪ್ರಜ್ವಲ್ ಶಿರೋಳ ಪ್ರಜ್ಞಾಹೀನನಾಗಿದ್ದರಿಂದ ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಲೇಬೇಕು ಎಂದು ವೈದ್ಯರು ಹೇಳಿದ್ದರು.
ಪೋಷಕರಿಗೆ ವಿಷಯ ತಿಳಿಸಿ ಒಂದೂವರೆ ಗಂಟೆಗಳ ಕಾಲ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಪ್ರಜ್ವಲ್ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ ಎಂದಿದ್ದಾರೆ.