ಸ್ಥಳೀಯ ಸುದ್ದಿ
ಖಾಸಗಿ ಬಸ್ಸೊಂದು ಬೈಕ್ ಡಿಕ್ಕಿ ಬೈಕ್ ಸವಾರ ಸಾವು
ಕೋಲಾರ: ಖಾಸಗಿ ಬಸ್ಸೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಅನಿಗಾನಹಳ್ಳಿ ಗೇಟ್ ಬಳಿ ನಡೆದಿದೆ.
ಮೃತ ಬೈಕ್ ಸವಾರನನ್ನು ಅಕ್ಕಯ್ಯಮ್ಮನದಿನ್ನೆ ಗ್ರಾಮದ ಮುರಳಿ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಖಾಸಗಿ ಬಾಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಬಂಗಾರಪೇಟೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಸಾಂದರ್ಭಿಕ ಚಿತ್ರ