ಸ್ಥಳೀಯ ಸುದ್ದಿ
ಗ್ರಾಮೀಣ ಪಕ್ಷದ ಬಲವರ್ಧನೆಗೆ ಮಹತ್ವದ ಸಭೆ ನಡೆಸಿದ ಕಾಂಗ್ರೆಸ್ ನಾಯಕರು
ಧಾರವಾಡ
ಧಾರವಾಡದ ಗಾಯಕವಾಡ ಕಲ್ಯಾಣ ಮಂಟಪದಲ್ಲಿ, ಬ್ಲಾಕ್ ಕಾಂಗ್ರೆಸ್ ಧಾರವಾಡ 71 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗ್ರಾಮಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಿದ ಎಲ್ಲ ಅಭ್ಯರ್ಥಿಗಳೊಂದಿಗೆ ಸಮಾಲೋಚನೆ ಸಭೆ ನಡೆಯಿತು.
ಈ ಕಾರ್ಯಕ್ರಮಕ್ಕೆ ಕೆಪಿಸಿಸಿ ಪದಾಧಿಕಾರಿಗಳಾದ ನಿಕೇತರಾಜ ಮೌರ್ಯ ಹಾಗೂ ಶ್ರೀಮತಿ ಶಿವಲೀಲಾ ವಿನಯ ಕುಲಕರ್ಣಿ ಗ್ರಾಮೀಣ ಭಾಗದ ಇತರೆ ಕಾಂಗ್ರೆಸ ಪಕ್ಷದ ಪದಾಧಿಕಾರಿಗಳು ಆಗಮಿಸಿದ್ದರು.
ಸಭೆಯ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾದ ಈಶ್ವರ ಶಿವಳ್ಳಿ ವಹಿಸಿದ್ದರು.
ಗ್ರಾಮ ಪಂಚಾಯತಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ ಸರ್ವ ಸದಸ್ಯರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.