ಸ್ಥಳೀಯ ಸುದ್ದಿ
ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಗ್ಯಾರಂಟಿ ಅಭಿಯಾನ
ಧಾರವಾಡ
ಧಾರವಾಡ ಗ್ರಾಮೀಣ 71 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಾವೇರಿಪೇಟೆ ಕಬ್ಬೇನೂರ ಮತ್ತು ಹಾರೋಬೆಳವಡಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ.
ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಪತ್ನಿ ಹಾಗೂ ಕಾಂಗ್ರೆಸ್ ಮುಖಂಡೆ ಶಿವಲೀಲಾ ಕುಲಕರ್ಣಿ ಅವರು ಈ ಕಾಂಗ್ರೆಸ್ ಗ್ಯಾರಂಟಿ ಅಭಿಯಾನಕ್ಕೆ ಮಹತ್ವ ಕೊಟ್ಟು, ಕಾಂಗ್ರೆಸ್ ಪಕ್ಷದ ಭವಿಷ್ಯವನ್ನು ಜನರಿಗೆ ತಿಳಿಸಿಕೊಡುತ್ತಿದ್ದಾರೆ.
ಗ್ರಾಮೀಣ ಭಾಗವಾದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಭಾಗ್ಯಗಳ ನೋಂದಣಿ ಪ್ರಮಾಣಪತ್ರವನ್ನು ಇದೇ ಸಂದರ್ಭದಲ್ಲಿ ಶಿವಲೀಲಾ ಕುಲಕರ್ಣಿ ವಿತರಿಸಿದ್ರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಹಾಗೂ ಗುರು ಹಿರಿಯರು ಭಾಗಿಯಾದರು.