ಸ್ಥಳೀಯ ಸುದ್ದಿ
ತ್ರಿವಳಿ ರೈಲು ದುರಂತದ ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ
ಬಾಲಾಸೋರ್
ಬೆಂಗಳೂರು – ಹೌರಾ ಎಕ್ಸ್ಪ್ರೆಸ್, ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲಿನ ನಡುವೆ ಒಡಿಶಾದ ಬಾಲಸೋರ್ನಲ್ಲಿ ನಡೆದ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 300ಕ್ಕೆ ಏರಿಕೆಯಾಗಿದೆ. 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಪ್ರಧಾನಿ ಶುಕ್ರವಾರ ರಾತ್ರಿಯೇ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತುಕತೆ ನಡೆಸಿ ದುರಂತದ ಬಗ್ಗೆ ವಿವರ ಪಡೆದಿದ್ದರು.
ಪ್ರಧಾನಿ ನರೇಂದ್ರ ಮೋದಿ ಒಡಿಶಾಗೆ ತೆರಳಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಮೊದಲು ಬಾಲಸೋರ್ನಲ್ಲಿ ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ನಂತರ ಕಟಕ್ನ ಆಸ್ಪತ್ರೆಗೆ ಭೇಟಿ ನೀಡಿ ದುರಂತದ ಬಗ್ಗೆ ಪರಿಶೀಲನೆ ನಡೆಸಿದ್ರು.