ತ್ರಿವಳಿ ರೈಲು ದುರಂತ- 240 ಕ್ಕೂ ಹೆಚ್ಚು ಸಾವು!
POWERCITY News.
ಓಡಿಶಾ (ಬಾಲಸೋರ್ )
ಓಡಿಶಾದ ತ್ರಿವಳಿ ರೈಲು ದುರಂತದಲ್ಲಿ ಮೃತರ ಸಂಖ್ಯೆ 240 ದಾಟಿದೆ.
ರೈಲು ದುರಂತ ಸ್ಥಳಕ್ಕೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿದ್ದು, ರೈಲ್ವೆ ಸಚಿವ ಘಟನಾ ಸ್ಥಳ ಪರಿಶೀಲನೆ ಮಾಡಿದ್ಧಾರೆ.
ಅಪಘಾತ ಸಂಭವಿಸಿದ್ದು ಹೇಗೆ..? ಯಾರ ಪ್ರಮಾದವಿದೆ, ತಾಂತ್ರಿಕ ಕಾರಣವೋ..? ಹ್ಯೂಮನ್ ಎರರ್ ಕಾರಣವೋ..? ಯಾವ ಕಾರಣದಿಂದ ಅಪಘಾತ ಸಂಭವಿಸಿದೆ..? ಈ ಎಲ್ಲಾ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರೈಲ್ವೆ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಈಗಾಗಲೇ ದುರಂತದ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದ್ದಾರೆ. ರೈಲ್ವೇ ಇಲಾಖೆ ಹೆಲ್ಪ್ಲೈನ್ ನಂಬರ್ ಬಿಡುಗಡೆ ಮಾಡಿದೆ. ಬೆಂಗಳೂರು-08022356409, ಬಂಗಾರಪೇಟೆ-08153255253.
ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ 240ಕ್ಕೂ ಅಧಿಕ ಜನ ಮೃತಪಟ್ಟಿದ್ದು, ಮೃತರ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರ ಪರಿಹಾರ ಘೋಷಿಸಿದೆ. ಮೃತರ ಕುಟುಂಬಸ್ಥರಿಗೆ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಹಾಗೂ ಸಣ್ಣ-ಪುಟ್ಟ ಗಾಯಾಳುಗಳಿಗೆ 50 ಸಾವಿರ ರೂಪಾಯಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ.
ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ನೋವಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ರೈಲ್ವೆ ಸಚಿವರೊಂದಿಗೆ ಮಾತನಾಡಿ ಪರಿಸ್ಥಿತಿ ಅವಲೋಕಿಸಲಾಗಿದೆ. ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ರಾತ್ರಿ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಕಳೆದ ರಾತ್ರಿಯಿಂದಲೂ ರಕ್ಷಣಾ ಕಾರ್ಯ ನಡೆಯುತ್ತಿದ್ದು, NDRF, ಏರ್ಫೋರ್ಸ್ ತಂಡಗಳಿಂದ ರಕ್ಷಣಾ ಕಾರ್ಯ ಮಾಡುತ್ತಿದ್ದಾರೆ. ನಜ್ಜುಗುಜ್ಜಾಗಿ ಮುದ್ದೆಯಂತಾಗಿರುವ ಬೋಗಿಗಳಲ್ಲಿ NDRF, ODRAF, ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಶೋಧ ನಡೆಸುತ್ತಿದ್ದಾರೆ. ರಕ್ಷಣಾ ತಂಡ ಬೋಗಿಗಳನ್ನು ಕತ್ತರಿಸಿ ಒಳಗೆ ಹುಡುಕಾಟ ಮಾಡುತ್ತಿದೆ.