ಸ್ಥಳೀಯ ಸುದ್ದಿ
ಧಾರವಾಡ ಜಿಲ್ಲೆಯಲ್ಲಿ ಉಗ್ರ ಹೋರಾಟದ ಎಚ್ಚರಿಕೆ
ಧಾರವಾಡ
ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅವರ ಬಣ್ಣದ ಬಗ್ಗೆ ಮಾತನಾಡಿದ್ದರ ಕುರಿತು ಕ್ಷಮೆ ಕೇಳದೇ ಹೋದ್ರೆ ಧಾರವಾಡ ಜಿಲ್ಲೆಯ ನಮ್ಮ ಸಮಾಜದ ಬಾಂಧವರನ್ನು ಕರೆದುಕೊಂಡು ಉಗ್ರ ಹೋರಾಟ ಮಾಡುತ್ತೇವೆ ಎಂದು ಆದಿಜಾಂಬವ ಸಮಾಜದ ಧಾರವಾಡ ಜಿಲ್ಲಾ ಅಧ್ಯಕ್ಷ ಅಶೋಕ ದೊಡಮನಿ ಎಚ್ಚರಿಸಿದ್ದಾರೆ.
ಈಗಾಗಲೇ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿ, ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಕೂಡಲೇ ಮಾಜಿ ಗೃಹ ಮಂತ್ರಿ ಖರ್ಗೆ ಅವರಿಗೆ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದ್ರು.