ಧಾರವಾಡ ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ
ಧಾರವಾಡ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಧಾರವಾಡ ಕೇಂದ್ರ ಕಚೇರಿಯಲ್ಲಿ ಇಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಈರೇಶ ಅಂಚಟಗೇರಿ ರವರು, 74 ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಹಾಪೌರರು, ದೇಶಕ್ಕಾಗಿ ಹೋರಾಡಿದ ಹೋರಾಟಗಾರರಾದ ಮಹಾತ್ಮಾ ಗಾಂಧೀಜಿ, ಸುಭಾಸ್ ಚಂದ್ರ ಭೋಸ್, ಸರ್ದಾರ್ ವಲ್ಲಭಬಾಯಿ ಪಟೇಲ್, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ವೀರರಾಣಿ ಕಿತ್ತೂರು ಚನ್ನಮ್ಮ, ವೀರ ಯೋಧರು ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ರವರ ಸತತ ಹೋರಾಟದಿಂದ ಇಂದು ನಮ್ಮ ದೇಶದ ಪ್ರಜಾಪ್ರಭುತ್ವ ಹೊಂದಿದ ರಾಷ್ಟ್ರವಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಉತ್ತಮ ಸೇವೆಗೈದ ಸಿಬ್ಬಂದಿಗಳಿಗೆ ಅಭಿನಂದನಾ ಪತ್ರವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರಾದ ಶಂಭುಗೌಡ ಸಾಲಿಮನಿ ರವರು, ಆನಂದ ಯಾವಗಲ್ ರವರು, ವಿಷ್ಣು ಕೊರ್ಲಹಳ್ಳಿ ರವರು, ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ಶಂಕರಾನಂದ ಬನಶಂಕರಿ ರವರು, ಜಳಕಿ ರವರು, ಶಂಕರಗೌಡ ಪಾಟೀಲ ರವರು, ಆರ್.ಎಂ ಕುಲಕರ್ಣಿ ರವರು, ಸಬರದ ರವರು, ಗಂಗಾಧರ ರವರು, ಹಾಗೂ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.