ಧಾರವಾಡ
ನಾಳೆ ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ
ಧಾರವಾಡ
ಜಿಲ್ಲೆಯಲ್ಲಿ ನಾಳೆಯಿಂದಲೂ ಮಳೆ ಮುಂದುವರಿಯುವದಾಗಿ ಹವಾಮಾನ ಇಲಾಖೆ ವರದಿ ನೀಡಿದ್ದು, ಮುಂಜಾಗ್ರತೆಯಾಗಿ ನಾಳೆ, ನವೆಂಬರ 20 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಇಂದು ಸಂಜೆ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಜಿಲ್ಲೆಯ ಎಲ್ಲ ಶಾಲಾ ಮುಖ್ಯಸ್ಥರಿಗೆ, ವಿದ್ಯಾರ್ಥಿ ಪಾಲಕರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.