ರಾಜ್ಯೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ
ಧಾರವಾಡ
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಇಂದು ಧಾರವಾಡದ ವಿದ್ಯಾವರ್ಧಕ ಸಂಘದಲ್ಲಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಈರೇಶ ಅಂಚಟಗೇರಿ ರವರ ನೇತೃತ್ವದಲ್ಲಿ, ಸಲಹೆ, ಸೂಚನೆಗಳ ಬಗ್ಗೆ ಕನ್ನಡ ಪರ ಸಂಘಟನೆಗಳೊಂದಿಗೆ, ಪಾಲಿಕೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಯನ್ನು ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳು, ಮೆರವಣಿಗೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ, ಪ್ರತಿ ಮನೆಯ ಮೇಲೆ ಕನ್ನಡದ ಧ್ವಜವನ್ನು ಹಾರಿಸುವುದು ಹಾಗೂ ಅವಳಿನಗರದ ವೃತ್ತದಲ್ಲಿ ಸಾಹಿತಿಗಳು ಹಾಗೂ ಕವಿಗಳ ಭಾವಚಿತ್ರವನ್ನು ಇಟ್ಟು ಗೌರವ ಸಲ್ಲಿಸುವದು ಹಾಗೂ ಇನ್ನಿತರ ಚಟುವಟಿಕೆಗಳ ಬಗ್ಗೆ ಚರ್ಚಿಸಿ, ಸಲಹೆ ಸೂಚನೆಗಳನ್ನು ಪಡೆಯಲಾಯಿತು.
ಈ ಸಂದರ್ಭದಲ್ಲಿ ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ವಿಜಯಾನಂದ ಶೆಟ್ಟಿ, ಸುರೇಶ ಬೆದರೆ, ಪಾಲಿಕೆಯ ಆಯುಕ್ತರಾದ ಗೋಪಾಲಕೃಷ್ಣ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಶಂಕರ ಹಲಗತ್ತಿ, ಸುದೀರ ಮುಧೋಳ, ಶಿವಾಜಿ ಡಿಂಬ್ರೆ,ವಸಂತ ಅರ್ಕಾಚಾರಿ ಕನ್ನಡಪರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಪಾಲಿಕೆಯ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.