ಸ್ಥಳೀಯ ಸುದ್ದಿ

ರಾಷ್ಟ್ರಪತಿ ಸ್ವಾಗತಕ್ಕೆ ಸಜ್ಜಾದ ಹುಬ್ಬಳ್ಳಿ-ಧಾರವಾಡ ಅವಳಿನಗರ

ಧಾರವಾಡ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ಪೌರ ಸನ್ಮಾನ ಸ್ವೀಕರಿಸಲು ಆಗಮಿಸುತ್ತಿರುವ ಭಾರತದ ಘನತೆವೆತ್ತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ರವರನ್ನು ಸ್ವಾಗತಿಸಲು ಅಂತಿಮ ಸರ್ವ ಸಿದ್ಧತೆಗಳು ನಡೆದಿವೆ.

ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ , ಮೇಯರ್ ಅಂಚಟಗೇರಿ ಸೇರಿದಂತೆ ಪಾಲಿಕೆ ಸದಸ್ಯರು ಕಾಮಗಾರಿಯನ್ನು ವೀಕ್ಷಣೆ ಮಾಡಿ ಪರಿಶೀಲನೆ ಮಾಡಿದ್ರು.
ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ ರವರು ಏನೆಲ್ಲಾ ಸಿದ್ಧತೆಗಳನ್ನು ಹಾಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಈ ಸಂದರ್ಭದಲ್ಲಿ ಪಾಲಿಕೆಯ ಉಪ ಮಹಾಪೌರರಾದ ಶ್ರೀಮತಿ ಉಮಾ ಮುಕುಂದ ರವರು, ಸಭಾನಾಯಕರಾದ ತಿಪ್ಪಣ್ಣ ಮಜ್ಜಿಗಿ ರವರು, ಮಾಜಿ ಮಹಾಪೌರರಾದ ವೀರಣ್ಣ ಸವಡಿ ರವರು, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಿವು ಮೆಣಸಿನಕಾಯಿ ರವರು, ಪಾಲಿಕೆಯ ಸದಸ್ಯರಾದ ಸಂತೋಷ ಚವಾಣ್ ರವರು, ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

ಇತ್ತ ಧಾರವಾಡದ ತಾಲೂಕಿನ ತಡಸಿನಕೊಪ್ಪ ಬಳಿ ಇರುವ IIIT ಕಟ್ಟಡದ ಉದ್ಘಾಟನೆಯ ಸ್ಥಳ ಪರಿಶೀಲನೆಯನ್ನು ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಮಾಡಿದ್ರು.

IIIT ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ 700 ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದ್ದು, ಕಟ್ಟಡಕ್ಕಾಗಿ ಜಮೀನು ಕೊಟ್ಟವರಿಗೆ ರಾಷ್ಟ್ರಪತಿಯಿಂದ ಸನ್ಮಾನ ಕಾರ್ಯಕ್ರಮ ನಡೆಸಲಾಗುವುದು ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದ್ರು.

Related Articles

Leave a Reply

Your email address will not be published. Required fields are marked *