ನವದೆಹಲಿ
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇನ್ನುಮುಂದೆ ಕರ್ನಾಟಕದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಮಾನ ಚಾಲನಾ ತರಬೇತಿ ಕೇಂದ್ರ ಆರಂಭಿಸುವುದರ ಕುರಿತು.
ಕೇಂದ್ರ ವಿಮಾನಯಾನ ಸಚಿವ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಅನುಮತಿ ನೀಡಲು ಸಮ್ಮತಿಸಿದ್ದಾರೆಂದು.
ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಗಣಿ ಮತ್ತು ಕಲ್ಲಿದ್ದಲು ಇಲಾಖೆ ಸಚಿವ ಶ್ರೀ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿ ಭಾಗದಲ್ಲಿ ವಿಮಾನ ಚಾಲನಾ ತರಬೇತಿ ಕೇಂದ್ರ ಸ್ಥಾಪನೆಯಿಂದ ರಾಜ್ಯದ ಎರಡನೇ ರಾಜಧಾನಿಯಾಗಿರುವ ಧಾರವಾಡ ಜಿಲ್ಲೆಗೆ ಮತ್ತೊಂದು ಹಿರಿಮೆ ದೊರೆಯಲಿದೆ. ದೇಶದಲ್ಲಿ ವಿಮಾನ ಚಾಲನೆ ಮಾಡುವ ಪೈಲಟ್ಗಳ ಕೊರತೆಯನ್ನು ನೀಗಿಸಲು ಆರು ವಿಮಾನ ತರಬೇತಿ ಸಂಸ್ಥೆಗಳನ್ನು ದೇಶಾದ್ಯಂತ ಕೇಂದ್ರ ಸರಕಾರ ಸ್ಥಾಪಿಸುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಯಾವುದೇ ವೈಮಾನಿಕ ಶಾಲೆಗಳು ಇಲ್ಲದಿರುವ ಹಿನ್ನೆಲೆಯಲ್ಲಿ. ಹುಬ್ಬಳ್ಳಿಯಲ್ಲಿ ಈ ತರಬೇತಿ ಕೇಂದ್ರ ತಲೆ ಎತ್ತಲಿರುವುದು ಈ ಭಾಗದ ಜನತೆಗೆ ಸಂತೋಷಕರ ವಿಷಯ ವಾಗಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜೋಶಿ, ಈ ಹಿಂದಿನ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಶ್ರೀ ಹರದೀಪ್ ಸಿಂಗ್ ಪುರಿ ಹಾಗೂ ಈಗಿನ ವಿಮಾನ ಯಾನ ಸಚಿವ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರುಗಳೊಂದಿಗೆ ಉತ್ತರ ಕರ್ನಾಟಕದ ಹುಬ್ಬಳ್ಳಿ, ವಿಮಾನ ನಿಲ್ದಾಣದಲ್ಲಿ ವಿಮಾನ ಚಾಲನಾ ತರಬೇತಿ ಕೇಂದ್ರ ಸ್ಥಾಪಿಸಲು ಒತ್ತಾಯ ಮಾಡಿದ್ದು, ನನ್ನ ಬೇಡಿಕೆಗೆ ಸ್ಫಂದಿಸಿರುವ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಈ ಕ್ರಮದಿಂದ ಇಡೀ ಉತ್ತರ ಕರ್ನಾಟಕದ ವಿಮಾನ ಚಾಲನಾ ತರಬೇತಿ ಬಯಸುವ ಯುವಕರಿಗೆ ಇದೊಂದು ಸುವರ್ಣ ಅವಕಾಶ ಸಿಕ್ಕಂತಾಗಿದೆಯಲ್ಲದೇ ಈ ಕೇಂದ್ರ ಸ್ಥಾಪನೆಯಿಂದ ಕೈಗಾರಿಕೋದ್ಯಮಕ್ಕೂ ಸಹಕಾರಿಯಾಗಲಿದೆ. ಎಂದೂ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಚಾಲನಾ ತರಬೇತಿ ಕೇಂದ್ರ ಸ್ಥಾಪಿಸಲು ಒಪ್ಪಿಗೆ ಸೂಚಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ಹಾಗೂ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರುಗಳಿಗೆ ತಿಳಿಸಿದ್ದಾರೆ. ಕೇಂದ್ರ ಸಚಿವ ಜೋಶಿ ಧನ್ಯವಾದಗಳನ್ನ ತಿಳಿಸಿದ್ದಾರೆ.