ಸ್ಥಳೀಯ ಸುದ್ದಿ
ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಕೇಂದ್ರ ಸಚಿವ ಪಿಯೂಷ್ ಗೊಯೆಲ್ ಭೇಟಿ
ಧಾರವಾಡ
ವಿಶ್ವದ ಅತಿ ಉದ್ದದ ಪ್ಲಾಟ್ ಫಾರ್ಮ್ ಎಂಬ ಹೆಗ್ಗಳಿಕೆಗೆ ಪಾತ್ರವಾದ ಏಕೈಕ ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಹಾಗೂ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾದ ಸನ್ಮಾನ್ಯ ಶ್ರೀ ಪಿಯೂಷ್ ಗೋಯಲ್ ರವರು ಭೇಟಿ ನೀಡಿದ್ರು.
ರೈಲ್ವೆ ನಿಲ್ದಾಣವನ್ನು ವೀಕ್ಷಣೆ ಮಾಡಿದ ಅವರು, ಈ ಸಂದರ್ಭದಲ್ಲಿ ಈ ಅಭೂತಪೂರ್ವ ನಿರ್ಮಾಣಕ್ಕೆ ಕಾರಣಭೂತರಾದ ಕೇಂದ್ರ ಕಲ್ಲಿದ್ದಲು ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಸನ್ಮಾನ್ಯ ಶ್ರೀ ಪ್ರಹ್ಲಾದ ಜೋಶಿ ರವರಿಗೆ, ಸನ್ಮಾನ್ಯ ಸಚಿವರು ಅಭಿನಂದನೆಗಳನ್ನು ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಸಚಿವರೊಂದಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ, ರೈಲ್ವೆ ಅಧಿಕಾರಿಗಳು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.