ಕೇರಳ /ತಿರುವನಂತಪುರಂ: ಬಾಲ ಕಾರ್ಮಿಕ ಪದ್ಧತಿಯನ್ನು
ತಡೆಗಟ್ಟುವ ಉದ್ದೇಶದಿಂದ ಕೇರಳ “ಸರ್ಕಾರವು ಇ ವಿನೂತನ ಯೋಜನೆಯೊಂದನ್ನು ಜಾರಿ ಮಾಡಿದೆ.
ಬಾಲ ಕಾರ್ಮಿಕರ ಬಗ್ಗೆ ಮಾಹಿತಿ ನೀಡಿದವರಿಗೆ
₹2,500 ಬಹುಮಾನ ‘ನೀಡುವುದಾಗಿ ಘೋಷಣೆ ಮಾಡಿದೆ.
ಈ ಕುರಿತು ಮಾಹಿತಿ ನೀಡಿದ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವೀಣಾ
ಜಾರ್ಜ್, “ದೇಶದಲ್ಲಿ ಈಗಾಗಲೇ ಬಾಲ ಕಾರ್ಮಿಕ ಪದ್ದತಿಯನ್ನು ನಿಷೇಧಿಸಲಾಗಿದೆ.ಮಕ್ಕಳನ್ನು ದುಡಿಸಿಕೊಳ್ಳುವುದು ಕ್ರಿಮಿನಲ್ ಅಪರಾಧ. ಇದನ್ನು ತಡೆಗಟ್ಟುವ ಉದ್ದೇಶದಿಂದ ಬಾಲ ಕಾರ್ಮಿಕರ ಮಾಹಿತಿ
ನೀಡಿದವರಿಗೆ ಪ್ರೋತ್ಸಾಹಧನ ನೀಡುವ ಯೋಜನೆ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.