ಧಾರವಾಡ
ಧಾರವಾಡ ಜಿಲ್ಲೆಯಲ್ಲಿ ಸಂಭ್ರಮದ 73 ನೇ ಗಣರಾಜ್ಯೋತ್ಸವ
ಧಾರವಾಡ
ಧಾರವಾಡ ಜಿಲ್ಲೆಯಲ್ಲಿ 73 ನೇ ಗಣರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಯಿತು.
ಉಸ್ತುವಾರಿ ಸಚಿವರಾದ ಬಳಿಕ ಇಂದು ಜಿಲ್ಲೆಗೆ ಮೊದಲ ಬಾರಿಗೆ ಭೇಟಿ ನೀಡಿದ ಸಚಿವ ಹಾಲಪ್ಪಾ ಆಚಾರ್ ಅವರು ನಗರದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೇರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.
ಇದಕ್ಕೂ ಮೊದಲು ಗಣಿ,ಭೂವಿಜ್ಞಾನ ,ಮಹಿಳಾ,ಮಕ್ಕಳ ಅಭಿವೃದ್ಧಿ ,ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಸಬಲೀಕರಣ ಖಾತೆ ಹಾಗೂ ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್ ಅವರು
ಸ್ತೂಪ,ಡೆಪ್ಯುಟಿ ಚೆನ್ನಬಸಪ್ಪ ಹಾಗೂ ಕೆ.ಜಿ.ಕುಂದಣಗಾರ ಅವರ ಪ್ರತಿಮೆಗಳಿಗೆ ಗೌರವ ಅರ್ಪಿಸಿದರು.
ಕೋವಿಡ್ ರೂಲ್ಸ್ ಪಾಲನೆಯೊಂದಿಗೆ ಗಣರಾಜ್ಯೋತ್ಸವದ ಕಾರ್ಯಕ್ರಮ ನೇರವೇರಿತು.
ನಗರದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಡಿಸಿ, ಎಸ್ಪಿ,ಎಸಿ, ಎಡಿಸಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.