ಧಾರವಾಡಸ್ಥಳೀಯ ಸುದ್ದಿಹುಬ್ಬಳ್ಳಿ

ಎಚ್ಚರಿಕೆ! ಇಂದಿನಿಂದ 19ರ ವರೆಗೆ ಪ್ರತಿಬಂಧಕಾಜ್ಞೆ ಜಾರಿ: ನಿತೇಶ್ ಕುಮಾರ ಪಾಟೀಲ್ !

ಹಿಜಾಬ್ ಪ್ರಕರಣ ಆದೇಶ ಸಂಭವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮಾ.15 ರಿಂದ 19 ರವರೆಗೆ ಪ್ರತಿಬಂಧಕಾಜ್ಞೆ!

ಧಾರವಾಡ(ಕರ್ನಾಟಕ ವಾರ್ತೆ) : ಹುಬ್ಬಳ್ಳಿ

“ಹಿಜಾಬ್” ಪ್ರಕರಣಕ್ಕೆ ಸಂಬಂಧಿಸಿದಂತೆ , ನಾಳೆ ಮಾರ್ಚ್ 15 ರಂದು ಉಚ್ಛನ್ಯಾಯಾಲಯದಿಂದ ಆದೇಶ ಹೊರಡುವ ಸಂಭವವಿದ್ದು , ಈ ಸಮಯದಲ್ಲಿ ಧಾರವಾಡ ಜಿಲ್ಲೆಯಾದ್ಯಂತ ( ಗ್ರಾಮೀಣ ) ಮತೀಯ ಸೌಹಾರ್ದತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಬರಲು ದಿನಾಂಕ 15-03-2022 ರಂದು ಬೆಳಿಗ್ಗೆ 06:00 ಗಂಟೆಯಿಂದ 19-03-2022 ರಂದು ಬೆಳಿಗ್ಗೆ 06:00 ಗಂಟೆಯವರೆಗೆ ಸಿ.ಆರ್.ಪಿ.ಸಿ 1973 ರ ಕಲಂ 144 ರ ಮೇರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಆದೇಶ ಹೊರಡಿಸಿದ್ದಾರೆ.

File

ಧಾರವಾಡ ಜಿಲ್ಲಾ ಗ್ರಾಮೀಣ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು , ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ .

ಅಕ್ರಮ ಶಸ್ತ್ರಾಸ್ತ್ರ ಗಳು ಮತ್ತು ಹರಿತವಾದ ಆಯುಧ ಗಳನ್ನೊಳಗೊಂಡಂತೆ ಅಪಾಯ ಉಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.

ಕಲ್ಲುಗಳನ್ನು , ಕ್ಷಾರಪದಾರ್ಥ , ಪಟಾಕಿ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಹಿಕ ವಸ್ತುಗಳು ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿ , ಕಲ್ಲುಗಳನ್ನು ಮತ್ತು ಇತರ ಎಸೆಯುವಂತಹ ವಸ್ತುಗಳನ್ನು ಎಸೆಯುವ ತೆಗೆದುಕೊಂಡು ಹೋಗುವುದನ್ನು ಪ್ರತಿಬಂಧಿಸಲಾಗಿದೆ .

ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು ಪ್ರತಿ ಬಂಧಿಸಲಾಗಿದೆ .

file

ಬಹಿರಂಗವಾಗಿ ಘೋಷಣೆ ಮಾಡುವುದು , ಪದ ಹಾಡುವುದು , ವಾದ್ಯ ಬಾರಿಸುವುದು , ವ್ಯಾಖ್ಯಾನ ಕೊಡುವುದು , ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ಪ್ರತಿಬಂಧಿಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು , ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು , ಚಿಹ್ನೆಗಳು , ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ಪ್ರತಿಬಂಧಿಸಲಾಗಿದೆ .

ಯಾವುದೇ ವ್ಯಕ್ತಿ ಸಾರ್ವಜನಿಕರಾಗಲಿ ಮಾರಕಾಸ್ತ್ರಗಳು , ಸ್ಫೋಟಕ ವಸ್ತುಗಳು , ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ.

ಜಿಲ್ಲಾಧಿಕಾರಿಗಳು ಧಾರವಾಡ

ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು . ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.ಶವ ಸಂಸ್ಕಾರಕ್ಕೆ ಅಥವಾ ಮದುವೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ .

ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಸಬೇಕು.ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 18 ರ ಅಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

Related Articles

Leave a Reply

Your email address will not be published. Required fields are marked *