ಸ್ಥಳೀಯ ಸುದ್ದಿ

ಸರ್ವೋತ್ತಮ ಸೇವಾ ಪ್ರಶಸ್ತಿ ‌ಪ್ರಧಾನ

ಧಾರವಾಡ

ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ 10 ಮಂದಿ ಅಧಿಕಾರಿಗಳಿಗೆ 2022 ರ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಧಾರವಾಡ ಜಿಲ್ಲೆಯಲ್ಲಿ ವಿವಿಧ ಇಲಾಖೆಯಲ್ಲಿ ಪ್ರಮಾಣಿಕ ಹಾಗೂ ಕರ್ತವ್ಯ ನಿಷ್ಠೆಗೆ ಬದ್ಧರಾಗಿ ಹೆಸರು ಮಾಡಿರುವ ಅಧಿಕಾರಿಗಳ ಆಯ್ಕೆಯನ್ನು ಮಾಡಿ ಈ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

ಇದರಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಅಧಿಕಾರಿಯಾಗಿರುವ ಮಂಜುನಾಥ ಗೂಳಪ್ಪನವರ್ ಕೂಡ ಒಬ್ಬರು.

ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಹಾಗೂ ಎಸ್ಪಿ ಕೃಷ್ಣಕಾಂತ್ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನಿಸಿ ಗೌರವಿಸಿದ್ರು.‌

ಈ ವೇಳೆಯಲ್ಲಿ ಧಾರವಾಡ ಜಿಲ್ಲೆಯ ಎಲ್ಲಾ ಇಲಾಖೆಯ ಹಿರಿಯ ಅಧಿಕಾರಿ ವೃಂದದವರು ಪಾಲ್ಗೊಂಡಿದ್ದರು…

ಪ್ರಶಸ್ತಿ ಪಡೆದಿರುವ ಈ 10 ಮಂದಿ ಅಧಿಕಾರಿಗಳಿಗೆ ಈ ಪ್ರಶಸ್ತಿಗಳು ಸಿಕ್ಕಿದ್ದು, ತಮ್ಮ ಕರ್ತವ್ಯದಲ್ಲಿ ಮತ್ತಷ್ಟು ಸಾಮಾಜಿಕ ಜವಾಬ್ದಾರಿ ಹೆಚ್ಚಿಸಿದಂತು ಸತ್ಯ…

Related Articles

Leave a Reply

Your email address will not be published. Required fields are marked *