ಶ್ರೀ ಸಾಯಿ ಮಹಾವಿದ್ಯಾಲಯದಲ್ಲಿ ಗುರುಪೂರ್ಣಿಮೆ ಸಂಭ್ರಮ
ಧಾರವಾಡ
ಶ್ರೀ ಸಾಯಿ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರು ಪೂರ್ಣಿಮೆ ದಿನವನ್ನು ಆಚರಿಸಿ, ಅತಿಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ವಿದ್ಯಾರ್ಥಿಗಳು ಭಾರತೀಯ ಸಂಸ್ಕøತಿಯ ಹಾಗೂ ಗುರುಕುಲ ಪದ್ದತಿಯ ಪ್ರಕಾರ ಎಲ್ಲ ಉಪನ್ಯಾಸಕರ ಪಾದಪೂಜೆ ಮಾಡುವುದರ ಮೂಲಕ ಗುರುಗಳಿಗೆ ಅತ್ಯಂತ ವಿಶೇಷವಾದ ರೀತಿಯಲ್ಲಿ ಗುರುವಂದನೆಯನ್ನು ಸಲ್ಲಿಸಿದರು.
ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವುದರ ಮೂಲಕ ಉದ್ಘಾಟಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಪ್ರಾಚಾರ್ಯರಾದ
ಡಾ. ಬಿ ಸಿ ಬಿರಾದಾರ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ತಮ್ಮ ವಿದ್ಯಾರ್ಥಿ ಜೀವನದ ಕುರಿತು ಹಾಗೂ ಶಿಕ್ಷಣದ ಪ್ರಾಮುಖ್ಯತೆಯನ್ನು ತಿಳಿಸುವುದರ ಮೂಲಕ ತಮ್ಮ ಬಾಲ್ಯ ಜೀವನದ ನೆನಪುಗಳನ್ನು ಮೆಲಕು ಹಾಕಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಅಧ್ಯಕ್ಷರಾದ ಡಾ. ಶ್ರೀಮತಿ ವೀಣಾ ಬಿರಾದಾರ ಇವರು ವಿದ್ಯಾರ್ಥಿಗಳು ಭಾರತೀಯ ಸಂಸ್ಕøತಿಯ ಹಾಗೂ ಗುರುಕುಲ ಪದ್ದತಿಯ ಪ್ರಕಾರ ಗುರುಪೂರ್ಣಿಮೆಯನ್ನು ಆಚರಿಸಿದ್ದನ್ನು ಶ್ಲಾಘಿಸಿದರು. ವಿದ್ಯಾರ್ಥಿಗಳು ಶ್ರದ್ಧೆ, ಪ್ರಾಮಾಣಿಕತೆ, ಉತ್ಸಾಹವನ್ನು ಬೆಳೆಸಿಕೊಂಡು ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದರು.
ಇನ್ನೊರ್ವ ಅತಿಥಿಯಾಗಿ ಆಗಮಿಸಿದ್ದ ಶ್ರೀಮತಿ ಮಂಜುಳಾ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದ್ರು.
ವೇದಿಕೆಯ ಮೇಲೆ ಡಾ. ಎಸ್ ಬಿ ಗಾಡಿ, ಪ್ರಾಚಾರ್ಯರಾದ ಶ್ರೀ ನಾಗರಾಜ ಶಿರೂರ, ಎಲ್ಲ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು, ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರಗು ತಂದರು.