ಸ್ಥಳೀಯ ಸುದ್ದಿ
ಮಾರ್ಚ 11 ಕ್ಕೆ ಧಾರವಾಡಕ್ಕೆ ಐಐಟಿ ಉದ್ಘಾಟನೆಗಾಗಿ ಆಗಮಿಸಲಿದ್ದಾರೆ ಪ್ರಧಾನಿ ಮೋದಿ
ಧಾರವಾಡ
ಧಾರವಾಡ ಜಿಲ್ಲೆಯಲ್ಲಿ ಮುಂದಿನ ತಿಂಗಳು ಮಾರ್ಚ 11 ಕ್ಕೆ ಮೋದಿ ಬರಲಿದ್ದು, ಐಐಟಿ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಕೇಂದ್ರ ಕಲ್ಲಿದ್ದಲು, ಗಣಿ, ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಸನ್ಮಾನ್ಯ ಪ್ರಹ್ಲಾದ ಜೋಷಿ ರವರು ಸ್ಢಳ ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು 1 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ಬಗ್ಗೆ ಪೂರ್ವಭಾವಿ ಸಭೆಯನ್ನು ತೆಗೆದುಕೊಂಡರು.
ಈ ಸಂದರ್ಭದಲ್ಲಿ ಶಾಸಕರಾದ ಅಮೃತ ದೇಸಾಯಿ, ಅರವಿಂದ ಬೆಲ್ಲದ ರವರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಈರೇಶ ಅಂಚಟಗೇರಿ ರವರು, ಬಯಲುಸೀಮೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ತವನಪ್ಪ ಅಷ್ಟಗಿ, ಮಾಜಿ ಶಾಸಕರಾದ ಶ್ರೀಮತಿ ಸೀಮಾ ಮಸೂತಿ ಜಿಲ್ಲಾಧಿಕಾರಿಗಳಾದ ಗುರುದತ್ ಹೆಗಡೆ, ಎಸ್ಪಿ ಲೋಕೇಶ ಜಗಲಾಸರ ರವರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.