ಸೂಚಕರ ಮೂಲಕ ಮಾಜಿ ಸಚಿವ ವಿನಯ ಕುಲಕರ್ಣಿ ನಾಮಪತ್ರ ಸಲ್ಲಿಕೆ
ಧಾರವಾಡ
ಮಾಜಿ ಸಚಿವ ವಿನಯ ಕುಲಕರ್ಣಿ ಅವರು ಇಂದು ಸೂಚಕರ ಮೂಲಕ ಕಾಂಗ್ರೆಸ್ ಪಕ್ಷದ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ರು.
ಇಂದು ಮಧ್ಯಾಹ್ನ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿದ ಮಾಜಿ ಸಚಿವರ ಪತ್ನಿ ಶೀವಲೀಲಾ ಕುಲಕರ್ಣಿ ಅವರು ಸೂಚಕರ ಮೂಲಕ ಪತಿಯ ಉಮೇದುವಾರಿಕೆಗೆ ನಾಮಪತ್ರ ಸಲ್ಲಿಸಿದ್ರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಲೀಲಾ ಕುಲಕರ್ಣಿ ಅವರು, ಈ ಬಾರಿ ಕ್ಷೇತ್ರದಲ್ಲಿ ಪತಿ ವಿನಯ ಕುಲಕರ್ಣಿ ಪರವಾಗಿ ಅಲೆಯಿದ್ದು, ಸುಮಾರು 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇವೆ.
ಇವತ್ತು ಸೂಚಕರ ಮೂಲಕ ನಾಮಪತ್ರ ಸಲ್ಲಿಸಿದ್ದೇವೆ. ಎಪ್ರೀಲ್ 18 ರಂದು ನ್ಯಾಯಾಲಯದ ತೀರ್ಮಾನದ ಬಳಿಕ ವಿನಯ ಕುಲಕರ್ಣಿ ಅವರು ಜಿಲ್ಲೆಗೆ ಬಂದ್ರೆ ದೊಡ್ಡ ಪ್ರಮಾಣದಲ್ಲಿ ಅಭಿಮಾನಿಗಳನ್ನು ಸೇರಿಸಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಾಗುವುದು ಎಂದರು.
ಮಾಜಿ ಸಿಎಂ ಶೆಟ್ಟರ ಅವರು ಕಾಂಗ್ರೆಸ ಪಕ್ಷಕ್ಕೆ ಸೇರ್ಪಡೆಯಾಗಿರುವುದರಿಂದ ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆನೆಬಲ ಬಂದಂತೆ ಆಗಿದೆ.
ಇನ್ನು ಕ್ಷೇತ್ರದಲ್ಲಿ ಇರುವ ಅಲ್ಪಸಂಖ್ಯಾತರ ವೋಟಗಳು ಡಿಲೀಟ್ ಆಗಿದ್ದು, ಈ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರು ಕೊಡಲಾಗಿದೆ.
ಪಕ್ಷಕ್ಕೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಗ್ರಾಮೀಣ ಭಾಗದಲ್ಲಿ ಅಷ್ಟಗಿ ಅವರು ಕಾಂಗ್ರೆಸ ಪಕ್ಷಕ್ಕೆ ಸೇರ್ಪಡೆ ಆದ್ರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಶೀವಲೀಲಾ ಕುಲಕರ್ಣಿ ಅವರು ಈ ಬಗ್ಗೆ ಕಾಂಗ್ರೆಸ ಪಕ್ಷದ ವರೀಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.