ಸ್ಥಳೀಯ ಸುದ್ದಿ
ಸಿಎಂ ಕುಟುಂಬದ ಕುರಿತು ಅವಹೇಳನಕಾರಿ ಪೋಸ್ಟ್ ಬಿಜೆಪಿ ಕಾರ್ಯಕರ್ತೆ ಪೊಲೀಸ್ ವಶಕ್ಕೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲ ನಟರಾಜ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ಕುರಿತು ತುಮಕೂರು ಮೂಲದ ಬಿಜೆಪಿ ಕಾರ್ಯಕರ್ತೆ ಶಕುಂತಲ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು.
ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಇದೀಗ ಇಂದು ಶಕುಂತಲಾಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.