ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಶಿಕ್ಷಣದ ಪ್ರಮುಖ ಅಂಗ : ರವಿ ದಂಡಿನ್
ಗಜೇಂದ್ರಗಡ:ನಗರದ ಕೆ.ಎಸ್.ಎಸ್.ಕಾಲೇಜಿನ ೨೦೨೩-೨೪ ನೇ ಸಾಲಿನ ಸಾಂಘಿಕ, ಸಾಂಸ್ಕೃತಿಕ, ಎನ್.ಎಸ್.ಎಸ್.ಚಟುವಟಿಕೆಗಳ ಉದ್ಘಾಟನಾ ಹಾಗೂ ಪದವಿ ವಿದ್ಯಾರ್ಥಿಗಳ ಬೀಳ್ಕೋಡುಗೆ ಸಮಾರಂಭ
ಈ ಸಂದರ್ಭದಲ್ಲಿ ಉದ್ಘಾಟಿಸಿ ಮಾತನಾಡಿದ ಗಜೇಂದ್ರಗಡ ಪೋಲಿಸ್ ಠಾಣೆಯ ಪಿ.ಎಸ್.ಐ.ಸೋಮನಗೌಡ ಗೌಡರವಿದ್ಯಾರ್ಥಿಗಳು ಕೇವಲ ವಿದ್ಯಾರ್ಜನೆಗೆ ಸೀಮಿತವಾಗದೆ ವಿದ್ಯೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಸಹ ಒತ್ತನ್ನು ನೀಡಬೇಕಾಗಿದೆ ಎಂದು ಹೇಳಿದರು.ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಶಿಕ್ಷಣದ ಪ್ರಮುಖ ಅಂಗವಾಗಿವೆ.ಇದನ್ನು ಅರಿತುಕೊಳ್ಳಬೇಕಾಗಿದೆ ಎರಡು ಕ್ಷೇತ್ರಗಳಲ್ಲಿ ಬೆಳವಣಿಗೆಯಾಗಬೇಕಾದರೆ ಶಾಲಾ ಕಾಲೇಜುಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಇಂತಹ ಸಾಂಘಿಕ ಚಟುವಟಿಕೆಗಳಲ್ಲಿ ಭಾಗಿಯಾಗಿ ಎಂದರು.
ಬಳಿಕ ಸಂಸ್ಥೆಯ ಕಾರ್ಯದರ್ಶಿ ರವೀಂದ್ರನಾಥ ದಂಡಿನ ಮಾತನಾಡಿ ಶಿಕ್ಷಣ ಸಂಸ್ಥೆ ಮತ್ತು ಶಿಕ್ಷಣ ಕ್ಷೇತ್ರದ ಉನ್ನತಿಗಾಗಿ ಪೋಷಕರು ಹಾಗೂ ಶಿಕ್ಷಕರಿ ಸಹಕರಿಸಬೇಕಾಗುತ್ತದೆ.ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ತಮ್ಮ ತಮ್ಮ ಕಾರ್ಯವನ್ನು ಪ್ರಾಮಾಣಿಕ, ಜವಾಬ್ದಾರಿಯುತವಾಗಿ ನಿಬಾಯಿಸಬೇಕು ಅಂದಾಗ ಮಾತ್ರ ಶೈಕ್ಷಣಿಕ ಗುರಿ ಮತ್ತು ಉದ್ದೇಶ ಈಡೇರಿಸಲು ಸಾಧ್ಯವಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಡಾ.ಮಲ್ಲಿಕಾರ್ಜುನ ಕುಂಬಾರ, ಮಲ್ಲಿಕಾರ್ಜುನ ಅವಾರಿ, ಎಚ್.ಎನ್.ಗೌಡರ, ಆರ್.ವ್ಹಿ.ಪತ್ತಾರ, ಪಿ.ಎಸ್.ಹುಲ್ಲೂರು ಸೇರಿದಂತೆ ಕಾಲೇಜಿನ ಸಿಬ್ಬಂದಿಗಳು ಹಾಗೂ ಮುದ್ದು ವಿದ್ಯಾರ್ಥಿಗಳು ಇದ್ದರು.