ವಸುಧ ವಂದನ ಕಾರ್ಯಕ್ರಮದಡಿ ಸಸಿ ನೆಡುವ ಕಾರ್ಯಕ್ರಮ
ಗಜೇಂದ್ರಗಡ: ತಾಲೂಕಿನ ಮುಶಿಗೇರಿ ಗ್ರಾಮದಲ್ಲಿ ತಾಲೂಕ ಪಂಚಾಯತ, ಸಮಾಜಿಕ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ ಸಹಯೋಗದಲ್ಲಿ ಇಂದು ಕೋಟಿ ವೃಕ್ಷ ಅಭಿಯಾನದ ವಸುಧ ವಂದನ ಕಾರ್ಯಕ್ರಮದಡಿ ಕೆರೆ ದಂಡೆಯಲ್ಲಿ ಸಸಿ ನಡೆಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮಾನ್ಯ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಡಿ ಮೋಹನ ಅವರು ಸಸಿ ನೆಟ್ಟು ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಇಂದಿನ ದಿನಮಾನಗಳಲ್ಲಿ ಆರೋಗ್ಯಕರ ಬದುಕನ್ನು ನಡೆಸಲು ಉತ್ತಮ ಜೀವನ ಶೈಲಿಯೊಂದಿಗೆ ಸ್ವಚ್ಚ ಹಾಗೂ ಉತ್ತಮ ಪರಿಸರ ಅತಿ ಅಗತ್ಯವಾಗಿದ್ದು,ಅದಕ್ಕಾಗಿ ನಾವು ಮರ ಗಿಡಗಳನ್ನು ಹೆಚ್ಚು ಹೆಚ್ಚಾಗಿ ಬೆಳೆಸುವ ಮೂಲಕ ಪ್ರಕೃತಿಗೆ ನಮ್ಮ ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ ಹಾಗೂ ದಿನೇ ದಿನೇ ಹೆಚ್ಚುತ್ತಿರುವ ಭೂಮಿಯ ತಾಪಮಾನವನ್ನು ಕಡಿಮೆ ಮಾಡಲು ಹಾಗೂ ಹಸಿರನ್ನು ಹೆಚ್ಚಿಸಿ ಶುದ್ಧ ಗಾಳಿಯನ್ನು ಪಡೆಯಲು ಪ್ರತಿಯೊಬ್ಬ ಮಗು, ಪ್ರತಿಯೊಬ್ಬ ನಾಗರಿಕರು ಮರಗಿಡಗಳನ್ನು ನೆಟ್ಟು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಹೇಳಿದರು
ಈ ವೇಳೆ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿಗಳು, ಪಿಡಿಒ, ಪಂಚಾಯತ ಹಾಗೂ ನರೇಗಾ ಸಿಬ್ಬಂದಿಗಳು, ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಗ್ರಾಮಸ್ಥರು ಹಾಜರಿದ್ದರು.