ಸ್ಥಳೀಯ ಸುದ್ದಿ
ಹೊಲಕ್ಕೆ ತೆರಳುತ್ತಿದ್ದ ವೇಳೆ ಎತ್ತು ತಿವಿದು ಯುವ ರೈತ ಸಾವು
ಚಿಕ್ಕಮಗಳೂರು:ಹೊಲಕ್ಕೆ ತೆರಳುತ್ತಿದ್ದ ವೇಳೆ ಎತ್ತು ದಾಳಿ ಮಾಡಿ ತಿವಿದ ಪರಿಣಾಮ ಯುವ ರೈತನೋರ್ವ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ವಿ. ಸಿದ್ದರಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಅರುಣ್ (29) ಮೃತ ದುರ್ವೈವಿ. ಅರುಣ್, ಹೊಲಕ್ಕೆ ತೆರಳುತ್ತಿದ್ದ ವೇಳೆ ಎತ್ತು ಏಕಾಏಕಿ ದಾಳಿ ಮಾಡಿದೆ. ಕೊಂಬಿನಿಂದ ತಿವಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅರುಣ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ನಿನ್ನೆ (ಆಗಸ್ಟ್ 21) ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಈ ಕುರಿತು ಎತ್ತಿನ ಮಾಲೀಕ ಕೃಷ್ಣಪ್ಪ ಎಂಬುವರ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.