BREAKING NEWSHubballiPolitical newsViral Imageರಾಜಕೀಯರಾಜ್ಯಸ್ಥಳೀಯ ಸುದ್ದಿ

Manohar Tehsildar: ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ!

Dakhani

PowerCityNewsBengaluru ಬೆಂಗಳೂರು: ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (Manohar Tehsildar) ನಿಧನರಾಗಿದ್ದಾರೆ. ಹಾನಗಲ್ (Hangal) ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್ ತಹಶೀಲ್ದಾರ್ ಅವರು ಬೆಂಗಳೂರಿನ (Bengaluru) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಮನೋಹರ್ ತಹಶಿಲ್ದಾರ್, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶೀಲ್ದಾರ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ. ಹೀಗಾಗಿ ಕಾಂಗ್ರೆಸ್‌ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇಂದು ಮಧ್ಯಾಹ್ನ ಹಾನಗಲ್‌ ಎನ್‌ಸಿಜೆಸಿ ಮಹಾವಿದ್ಯಾಲಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ ಬಳಿಕ ಅವರ ಹುಟ್ಟೂರಾದ ಆದ ಅಕ್ಕಿಹೊಳಿ ಗ್ರಾಮದ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ.

ಇತ್ತೀಚಿಗೆ ಸಂಸದ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿದ್ದರು. ಇಂದು ಮಧ್ಯಾಹ್ನ ಮೃತದೇಹವನ್ನು ಹಾನಗಲ್ ಎನ್‌ಸಿಜೆಸಿ ಮಹಾವಿದ್ಯಾಲಯ ಅವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ.

Advertisement

ನಾಲ್ಕು ಜನ ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನ ಮನೋಹರ್ ತಹಶೀಲ್ದಾರ್ ಅಗಲಿದ್ದಾರೆ.

ಬಲಿಜ ಸಮುದಾಯಕ್ಕೆ ಸೇರಿದ್ದ ತಹಶೀಲ್ದಾರ್‌  4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು ಹಿಂದೆ ಎಸ್‌.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ವಿಧಾನಸಭೆ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 1978ರಲ್ಲಿ ಮೊದಲ ಬಾರಿಗೆ ಹಾನಗಲ್‌ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾದ ಮನೋಹರ್‌ ತಹಶೀಲ್ದಾರ್‌ ಅವರು 1989, 1999, 2013 ಸೇರಿ 4 ಬಾರಿ ಗೆಲುವು ಸಾಧಿಸಿದ್ದರು.

Related Articles

Leave a Reply

Your email address will not be published. Required fields are marked *