ಕಾಂಗ್ರೆಸ್ ಕಾರ್ಯಕರ್ತೆ ‘ಬತುಲ್ ‘ಬೇಗಂ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ!
DAKHANI

POWER CITY NEWS :HUBBALLI/ಹುಬ್ಬಳ್ಳಿ: ನಗರದಲ್ಲಿ ಅಂಗನವಾಡಿ ಮಕ್ಕಳು ಹಾಗೂ ಬಾಣಂತಿಯರಿಗೆ ವಿತರಿಸಬೇಕಾದ ಪೌಷ್ಟಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿ ಹುಬ್ಬಳ್ಳಿ-ಧಾರವಾಡ ಪೂರ್ವ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಹಳೇ ಹುಬ್ಬಳ್ಳಿಯ ದುರ್ಗದಬೈಲ್‍ನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ದೊರೆಯಬೇಕೆಂಬ ಉದ್ದೇಶದಿಂದ ನೀಡುವ ಆಹಾರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವ ಮೂಲಕ ಆರೋಪಿ ಅಕ್ರಮ ಎಸಗಿದ್ದಾರೆ. ಅವರನ್ನು ತಕ್ಷಣ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಮೋರ್ಚಾ ಅಧ್ಯಕ್ಷೆ ಪ್ರತಿಭಾ ಪವಾರ ಹಾಗೂ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಮಂಜುನಾಥ ಕಾಟಕರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ, ಪೂಜಾ ರಾಯಕರ, ಪೂರ್ಣಿಮಾ ಶಿಂಧೆ, ಅನುರಾಧ ಚಿಲ್ಲಾಳ, ರಾಧಾಬಾಯಿ ಸಫಾರೆ, ಶೀಲಾ ಕಾಟಕರ, ಸುಮಿತ್ರಾ ಗುಂಜಾಳ, ಶಾಂತ ಹಿರೇಮಠ, ಪ್ರೀತಿ ಲದವಾ, ಪ್ರಭು ನವಲಗುಂದಮಠ, ಸಂತೋಷ
ಅರಕೇರಿ, ರಾಜು ಜರತಾರಘರ, ರಂಗಾ ಬದ್ದಿ, ರಾಜು ಕೊರ್ಯಾಣಮಠ, ಲಕ್ಷ್ಮೀಕಾಂತ ಘೋಡಕೆ, ಇತರರಿದ್ದರು.