ಜೂ.21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ!
ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಜೂ.18*: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಭಾರತೀಯ ಪುರಾತತ್ವ ಸರ್ವೇಕ್ಷಣಾ ವಲಯ ಸಹಯೋಗದಲ್ಲಿ ಜೂನ್ 21 ರಂದು ಬೆಳಿಗ್ಗೆ 6.45 ಕ್ಕೆ ಅಣ್ಣಿಗೇರಿಯ ಶ್ರೀ ಅಮೃತೇಶ್ವರ ದೇವಸ್ಥಾನದಲ್ಲಿ 8 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಏರ್ಪಡಿಸಲಾಗಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಲ್ಹಾದ ಜೋಶಿ ಅವರ ಘನ ಉಪಸ್ಥಿತಿಯಲ್ಲಿ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ ಉದ್ಘಾಟಿಸುವರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿಶೇಷ ಅತಿಥಿಗಳಾಗಿ ಭಾಗವಹಿಸುವರು. ಕೈಮಗ್ಗ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಂಕರ. ಬ. ಪಾಟೀಲ ಮುನೇನಕೊಪ್ಪ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ ಶೆಟ್ಟರ್ ಸೇರಿದಂತೆ, ಜಿಲ್ಲೆಯ ಶಾಸಕರು, ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರು, ಎಲ್ಲ ಸರ್ಕಾರಿ ಇಲಾಖೆಗಳು, ಎಲ್ಲ ಯೋಗ ಸಂಸ್ಥೆಗಳು, ಜಿಲ್ಲೆಯ ಎಲ್ಲ ಸರ್ಕಾರೇತರ ಸಂಘ ಸಂಸ್ಥೆಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.