POWERCITY NEWS : HUBBALLI
ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ಮೇಲ್ಸೇತುವೆ ನಿರ್ಮಾಣಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿತ್ತು. ಇ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಪಿಐಎಲ್ ಸಲ್ಲಿಕೆಯಾಗಿದ್ದವು.
ಆದರೆ ಅವೆಲ್ಲ ಪಿ ಐ ಎಲ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿ ಅರ್ಜಿದಾರರಿಗೆ ಶಾಕ್ ನೀಡಿದೆ. ಅರ್ಜಿದಾರರು ಸಲ್ಲಿಸಿದ್ದ ಮೇಲ್ಸೇತುವೆಯ ವಿನ್ಯಾಸ ಮತ್ತು ಕಾಮಗಾರಿಯ ಕುರಿತಾದ ವಿಷಯಗಳನ್ನು ಕೋರ್ಟ್ ನಿರ್ಧರಿಸಲು ಸಾಧ್ಯವಿಲ್ಲ ಎಂದಿದೆ.
ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಾಣ ವಾಗುತ್ತಿರುವ ಮೆಲ್ಸೇತುವೆ ಕಾಮಗಾರಿಯನ್ನು ಪ್ರಶ್ನಿಸಿ ನಗರದ 87 ನಿವಾಸಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಗಳನ್ನು ವಜಾಗೊಳಿಸಿ ಆದೇಶಿಸಿರುವ ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾ.ಕೃಷ್ಣದೀಕ್ಷಿತ್ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠವು ಅವಳಿನಗರದ ಸಂಚಾರ ದಟ್ಟಣೆ ನಿವಾರಿಸುವ ಪ್ರಮುಖ ಉದ್ದೇಶ ಹೊಂದಿದೆ ಹಾಗೂ ಈಗಾಗಲೇ 196 ಕೋಟಿ ವೆಚ್ಚದ ಯೋಜನೆಗೆ ಈಗಾಗಲೇ ಅರ್ಧದಷ್ಟು ಕಾಮಗಾರಿಗೆ ವೆಚ್ಚವಾಗಿದೆ. ಕಾಮಗಾರಿಗೆ ಸಂಭಂದಿಸಿದ ಅಧಿಕಾರಿಗಳು, ತಾಂತ್ರಿಕ ತಜ್ಞರು ಮೇಲ್ಸೇತುವೆ ಯೋಜನೆಯ ರೂಪುರೇಷೆ ಸಿದ್ಧಪಡಿಸಿದ್ದಾರೆ. ಎಂದು ಹೇಳಿ ಕಾಮಗಾರಿಯಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದಿದೆ.