BREAKING NEWSCITY CRIME NEWSFestival Ganesh chaturthi

“ವಿಕೆ”ಗೆ ಲಕ್ಷ್ಮಣ ರೇಖೆ ಎಳೆದ ನ್ಯಾಯಾಲಯ!

VK

POWER CITYNEWS : HUBL

ಧಾರವಾಡ: ಬಿಜೆಪಿ ಜಿಪಂ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷಿ ನಾಶದ ಆರೋಪ ಹೊತ್ತಿರುವ ಕಾಂಗ್ರೆಸ್‌ನ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್‌ ಕುಲಕರ್ಣಿ ಅವರಿಗೆ ಧಾರವಾಡದಲ್ಲಿ ಇಂದು ಮತದಾನ ಮಾಡಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸೋಮವಾರ ಧಾರವಾಢ ಜಿಲ್ಲೆ ಪ್ರವೇಶ ಕುರಿತು ಅನುಮತಿ ನಿರಾಕರಿಸಿದೆ. ಲೋಕಸಭಾ ಚುನಾವಣೆಯ ಎರಡನೇ ನಂತರ ಜಿಲ್ಲೆಯಲ್ಲಿ ಮೇಯರ್ ಉಪ ಮೇಯರ್ ಚುನಾವಣೆ ನಡೆಯುತ್ತಿದೆ.

ಆದರೆ ಧಾರವಾಡ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಷರತ್ತು ಸಡಿಲಿಕೆ ಮಾಡುವ ಮೂಲಕ ಮತ ಚಲಾಯಿಸಲು ಅನುಮತಿ ಕೋರಿ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ತಿರಸ್ಕರಿಸಿದ್ದಾರೆ.

ಒಂದಿಲ್ಲೊಂದು ಆಧಾರದ ಮೇಲೆ ವಿನಯ್‌ ಕುಲಕರ್ಣಿ ಅವರು ನ್ಯಾಯಾಲಯದ ಮೇಟ್ಟಿಲೇರುತ್ತಿದ್ದಾರೆ. ಆದರೆ, ಸುಪ್ರೀಂ ಕೋರ್ಟ್‌ ವಿಧಿಸಿರುವ ಷರತ್ತನ್ನು ಈ ನ್ಯಾಯಾಲಯ ಸಡಿಲಿಸಲಾಗದು ಎಂದು 2023ರ ಜೂನ್‌ನಲ್ಲಿ ಹೇಳಿತ್ತು.ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್‌ 15ರಂದು ಯೋಗೀಶ್‌ಗೌಡ ಅವರ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿ 15ನೇ ಆರೋಪಿಯಾಗಿದ್ದಾರೆ.

ಈಚೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್‌-ಉಪಮೇಯರ್‌ ಆಯ್ಕೆ ಚುನಾವಣೆಯಲ್ಲಿ ಮತದಾನ ಮಾಡಲು ಧಾರವಾಡಕ್ಕೆ ಭೇಟಿ ನೀಡಲು ಅವಕಾಶ ಮಾಡಿಕೊಡುವಂತೆ ವಿನಯ್‌ ಕುಲಕರ್ಣಿ ಕೋರಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಇದಕ್ಕೂ ಮುನ್ನ, ತನ್ನ ಡೈರಿ ಫಾರ್ಮ್‌ ನಿರ್ವಹಿಸಲು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಲು ಅನುಮತಿ ಕೋರಿ ಏಪ್ರಿಲ್‌ 5ರಂದು ಸಲ್ಲಿಸಿದ್ದ ಅರ್ಜಿಯನ್ನೂ ನ್ಯಾಯಾಲಯ ವಜಾ ಮಾಡಿತ್ತು.

ಕಳೆದ ವರ್ಷದ ನವೆಂಬರ್‌ನಲ್ಲಿ ಕುಲಕರ್ಣಿ ಅವರಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ಸಂಬಂಧಿ ವಿಜಯಲಕ್ಷ್ಮಿ ಪಾಟೀಲ್‌ ಅವರನ್ನು ಸುಚಿರಾಯು ಆಸ್ಪತ್ರೆಯಲ್ಲಿ ನೋಡಲು ಕೇವಲ ಮೂರು ತಾಸುಗಳಿಗೆ ಅವಕಾಶ ಸೀಮಿತಗೊಳಿಸಿತ್ತು. ಕುಲಕರ್ಣಿ ಅವರು ಮೂರು ದಿನ ಅಲ್ಲಿರಲು ಅವಕಾಶಕೊಡಬೇಕು ಎಂದು ವಿನಂತಿಸಿದ್ದರು. ಇದನ್ನು ನ್ಯಾಯಾಲಯ ಪುರಸ್ಕರಿಸಿರಲಿಲ್ಲ. ನ್ಯಾಯಾಲಯದ ವ್ಯಾಪ್ತಿ ಬಿಟ್ಟು ಹೊರಹೋಗುವಂತಿಲ್ಲ ಎಂಬ ಐದನೇ ಷರತ್ತಿನಲ್ಲಿ ಭಾಗಶಃ ಬದಲಾವಣೆ ಮಾಡಿ ನ್ಯಾಯಾಲಯವು 2021ರ ಡಿಸೆಂಬರ್‌ನಲ್ಲಿ ಆದೇಶಿಸಿದ್ದನ್ನು ಇಲ್ಲಿ ನೆನೆಯಬಹುದಾಗಿದೆ.

Related Articles

Leave a Reply

Your email address will not be published. Required fields are marked *