ಸ್ಥಳೀಯ ಸುದ್ದಿ
ಆರ್ ಸಿಬಿ-ಮುಂಬೈ ಪಂದ್ಯ ವೀಕ್ಷಿಸಿದ ಮಾಜಿ ಸಿಎಂ, ಸಿದ್ದರಾಮಯ್ಯ.
ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಇದೆ ವೇಳೆ ಕ್ರಿಕೆಟ್ ಅಭಿಮಾನಿಗಳಿಗೆ ಐಪಿಎಲ್ ಆಸಕ್ತಿಯೂ ಹೆಚ್ಚುತ್ತಿದೆ. ಚುನಾವಣಾ ಪ್ರಚಾರದ ಒತ್ತಡದಿಂದ ರಿಲ್ಯಾಕ್ಸ್ ಮೂಡ್ ಗೆ ಜಾರಿದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪ್ರಸಕ್ತ ಐಪಿಎಲ್ ನ ಬಹು ನಿರೀಕ್ಷಿತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ರೋಚಕ ಪಂದ್ಯ ವೀಕ್ಷಿಸಲು ಕ್ರೀಡಾಂಗಣದಲ್ಲಿ ಹಾಜರಿದ್ದರು.
”ಕ್ರಿಕೆಟ್ ನನ್ನ ಇಷ್ಟದ ಆಟ,ಆರ್ಸಿಬಿ ನನ್ನ ಹೆಮ್ಮೆಯ ತಂಡ..ನನ್ನಂತಹ ಕೋಟ್ಯಂತರ ಅಭಿಮಾನಿಗಳ ಹಾರೈಕೆ ಆರ್.ಸಿ.ಬಿ ಹುಡುಗರ ಜೊತೆಗಿದೆ..ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಓರ್ವ ಕನ್ನಡಿಗನಾಗಿ ನನ್ನ ಬೆಂಬಲ ಯಾವಾಗಲೂ ನಮ್ಮ ಆರ್ಸಿಬಿಗೆ.” ಎಂದು ಟ್ವೀಟ್ ಮಾಡಿದ್ದಾರೆ.