ಸ್ಥಳೀಯ ಸುದ್ದಿ
ಕೇಂದ್ರ ಸಚಿವರ ನೇತೃತ್ವದಲ್ಲಿ ಅಭಿವೃದ್ಧಿ ಬಗ್ಗೆ ಮಹತ್ವದ ಸಭೆ
ಹುಬ್ಬಳ್ಳಿ
ಇಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಭಾಗದಲ್ಲಿ ಇರುವ ಕೆಲವೊಂದು ಮೂಲಭೂತ ಸೌಕರ್ಯಗಳ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದ್ದು, ಇಂದು ಇದಕ್ಕೆ ಸಂಬಂಧಿಸಿದ ಅಧಿಕಾರಿಗಳ ಸಭೆ ಕರೆಯಲಾಗಿತ್ತು.
ನೀರಿನ ಸಮಸ್ಯೆ ಬಗ್ಗೆ ಕ್ಷೇತ್ರದ ಜನರಿಂದ ದೂರು ಬಂದಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಗಂಭೀರವಾಗಿ ಪರಿಗಣಿಸಿ, ಎಂದು ಕೇಂದ್ರ ಸಚಿವರು ಸೂಚನೆ ನೀಡಿದ್ರು.
ಯಾವುದೇ ಕಾರಣಕ್ಕೂ ಕ್ಷೇತ್ರದ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ ಅವರು ಸೂಚಿಸಿದ್ದು, ಎಲ್ಲಾ ಸಮಸ್ಯೆಗಳನ್ನು ಕೂಡ ಪರಿಹರಿಸಲಾಗುವುದು ಎಂದರು.
ಮಾಜಿ ಮುಖ್ಯಮಂತ್ರಿಗಳು ಮತ್ತು ಶಾಸಕರಾದ ಶ್ರೀ ಜಗದೀಶ ಶೆಟ್ಟರ, ಸಚಿವರಾದ ಶ್ರೀ ಶಂಕರ ಪಾಟೀಲ್ ಮುನೇನಕೊಪ್ಪ , ಧಾರವಾಡದ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್ , ಶಾಸಕರಾದ ಶ್ರೀ ಅರವಿಂದ ಬೆಲ್ಲದ ಮತ್ತು ಶ್ರೀ ಅಮೃತ ದೇಸಾಯಿ ಹಾಗೂ ಹು-ಧಾ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ ಹಾಗೂ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.