ಸ್ಥಳೀಯ ಸುದ್ದಿ
ಜಲಮಂಡಳಿ ಕಾರ್ಮಿಕರ ಹೋರಾಟಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಬೆಂಬಲ
ಧಾರವಾಡ
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಹೋರಾಟ ನಡೆಸುತ್ತಿರುವ ಜಲಮಂಡಳಿ ಗುತ್ತಿಗೆ ಕಾರ್ಮಿಕರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಬೆಂಬಲ ಕೊಡುವ ಮೂಲಕ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದಿದೆ.
ಮಾಜಿ ಸಿಎಂ ಕುಮಾರಸ್ವಾಮಿ ಪಂಚರತ್ನ ಯೋಜನೆ ಪ್ರಚಾರದಲ್ಲಿ ಇದ್ದರೂ ಕೂಡ ಧಾರವಾಡಕ್ಕೆ ಆಗಮಿಸಿ, ಹೋರಾಟ ಮಾಡುತ್ತಿರುವವರಿಗೆ ಬೆಂಬಲ ಸೂಚಿಸಿದ್ರು.
ಹೋರಾಟದ ನೇತೃತ್ವ ವಹಿಸಿರುವ ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ್ ಅವರೊಂದಿಗೆ ಚರ್ಚಿಸಿ ಮಾತುಕತೆ ನಡೆಸಿದ್ರು.
ಕಾರ್ಮಿಕರ ಸಮಸ್ಯೆಗೆ ಧ್ವನಿಯಾಗಿ ನಿಲ್ಲುವ ಪ್ರಾಮಾಣಿಕ ಕೆಲಸ ಮಾಡುವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ರು.