ತವರು ಜಿಲ್ಲೆಗೆ ಹೂವು ತರುವೆ ಹುಲ್ಲನ್ನಲ್ಲಾ- ಸಿಎಂ ಬಸವರಾಜ ಬೊಮ್ಮಾಯಿ….
ಧಾರವಾಡ
ಸಿಎಂ ಬಸವರಾಜ ಬೊಮ್ಮಾಯಿ ಧಾರವಾಡ ಜಿಲ್ಲೆಯ ಮನೆ ಮಗ. ಸಿಎಂ ಧಾರವಾಡ ಜಿಲ್ಲೆಯವರಾಗಿದ್ದರಿಂದ ಇಂದು ಆತ್ಮೀಯರೊಬ್ಬರ ಗ್ರಂಥ ಬಿಡುಗಡೆ ಕಾರ್ಯಕ್ರಮಕ್ಕೆ ಧಾರವಾಡಕ್ಕೆ ಬಂದಿದ್ದರು.
ನನ್ನ ತವರು ಜಿಲ್ಲೆಗೆ ಹೂವು ತರುತ್ತೇನೆ ಹೊರತು ಯಾವತ್ತಿಗೂ ಹುಲ್ಲನ್ನು ತರುವ ಕೆಲಸ ಮಾಡುವುದಿಲ್ಲಾ ಎಂದು
ಸಿಎಂ ಬೊಮ್ಮಾಯಿ ವಿದ್ಯಾಕಾಶಿ ಬಗ್ಗೆ ತಮಗೆ ಇರುವ ಅಭಿಮಾನವನ್ನು ಹೇಳಿದ್ದಾರೆ.
ಇನ್ನು ಧಾರವಾಡ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮತ್ತು ವಿದ್ಯಾವರ್ಧಕ ಸಂಘದ ಹಿನ್ನೆಲೆ ಹಾಗೂ ನಾಡೋಜ. ಡಾ.ಪಾಟೀಲ್ ಪುಟ್ಟಪ್ಪ ಅವರ ಸಾಧನೆಯ ಜೋತಗೆ ಗ್ರಂಥ ಬಿಡುಗಡೆಗೆ ಕಾರಣೀಕೃತರಾದ ಚೆನ್ನವೀರಗೌಡ ಅಣ್ಣಾ ಅವರ ಬಗ್ಗೆ ಗುಣಗಾನ ಮಾಡಿದ್ರು ಸಿಎಂ ಬೊಮ್ಮಾಯಿ.
ಇತಿಹಾಸವನ್ನು ಅರಿಯದವರು ಇತಿಹಾಸ ಸೃಷ್ಟಿಸಲಾರರು.ಸರ್ಕಾರದ ವತಿಯಿಂದಲೇ ಧಾರವಾಡ ಸೇರಿದಂತೆ ನಾಡಿನ ಐತಿಹಾಸಿಕ ಸ್ಥಳಗಳ ಗ್ರಂಥಗಳನ್ನು ಪ್ರಕಟಿಸುವ ಕಾರ್ಯಕ್ರಮವನ್ನು ಆಯವ್ಯಯದಲ್ಲಿ ಹಾಕಿಕೊಳ್ಳಲಾಗುವುದು ಎಂದರು.
ಧಾರವಾಡದ ಚರಿತ್ರೆ ದಾಖಲಿಸುವ ಕಾರ್ಯದ ಜವಾಬ್ದಾರಿಯನ್ನು ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ವಹಿಸಲಾಗುವುದು.
ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ಕನ್ನಡದ ಹಲವು ಸಂಸ್ಥೆಗಳ ಸ್ಥಾಪನೆ,ಕರ್ನಾಟಕ ರಾಜ್ಯ ರಚನೆಗೆ ಕಾರಣವಾದ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಮಹತ್ವದ ಸ್ಥಾನವಿದೆ.
ವಿಶಿಷ್ಠ ಅಂತರ್ಗತ ಶಕ್ತಿ ಇದೆ.ಸಂಘಕ್ಕೆ ಅಗತ್ಯವಿರುವ ಅನುದಾನ,ನಿವೇಶನ ಮತ್ತಿತರ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮವಾಗಿ ಬೆಂಬಲಿಸಲಿದೆ.
ನಾಡೋಜ ಪಾಟೀಲ ಪುಟ್ಟಪ್ಪನವರು ಸುಮಾರು 52 ವರ್ಷಗಳ ಕಾಲ ಸುದೀರ್ಘ ಅವಧಿಗೆ ಅಧ್ಯಕ್ಷರಾಗಿ ಹೋರಾಟ ಮಾಡಿದ್ದಾರೆ ಅವರ ಸಾಧನೆಯನ್ನು ಗೌರವಿಸಲು ಸರ್ಕಾರ ರಾಣೆಬೆನ್ನೂರು ತಾಲೂಕಿನ ಹಲಗೇರಿಯಲ್ಲಿ ಸ್ಮಾರಕ ನಿರ್ಮಿಸಲಿದೆ.
ಹಿರಿಯರನ್ನು ಸ್ಮರಿಸುವುದು ಸ್ಫೂರ್ತಿದಾಯಕವಾಗಿರುತ್ತದೆ ಎಂದರು.
ಬ್ರಿಟಿಷರ
ಕಾಲದಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದ ಚನ್ನವೀರಗೌಡ ಅಣ್ಣಾ ಪಾಟೀಲ ಅವರು ಧಾರವಾಡಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ.ಲಿಂಗಾಯತ ಟೌನ್ ಹಾಲ್,ವೀರಶೈವ ಮಹಾಸಭೆ,ಕೆಸಿಸಿ ಬ್ಯಾಂಕ್ ಸ್ಥಾಪನೆ ,ಎನ್ ಹೆಚ್ 4 ನಿರ್ಮಾಣ ಸೇರಿದಂತೆ ಹಲವು ಮಹತ್ವದ ಚಾರಿತ್ರಿಕ ಕಾರ್ಯಗಳನ್ನು ಅವರು ನಿರ್ವಹಿಸಿದ್ದಾರೆ .
ಇತಿಹಾಸವನ್ನು ತಿರುಚುವ ಪ್ರವೃತ್ತಿ ಇತ್ತೀಚೆಗೆ ಹೆಚ್ಚಾಗುತ್ತಿದೆ ಇದು ಸರಿಯಲ್ಲ.ಸತ್ಯವನ್ನು ವಸ್ತುನಿಷ್ಠವಾಗಿ ದಾಖಲಿಸಬೇಕು ಎಂದರು.
ಹುಬ್ಬಳ್ಳಿ ಧಾರವಾಡ ಸಮಗ್ರ ಅಭಿವೃದ್ಧಿಗೆ ಸರ್ಕಾರ ವಿಶೇಷ ಗಮನ ನೀಡಲಿದೆ.
ಚೆನ್ನೈ ಮುಂಬೈ ಕೈಗಾರಿಕಾ ಕಾರಿಡಾರಿನಲ್ಲಿ ಧಾರವಾಡ ಪ್ರಮುಖ ಕೈಗಾರಿಕಾ ಪ್ರದೇಶವಾಗಿ ಅಭಿವೃದ್ಧಿ ಹೊಂದುತ್ತಿದೆ.
ಹುಬ್ಬಳ್ಳಿ ಧಾರವಾಡ ಬೆಳಗಾವಿ ನೇರ ರೈಲು ಮಾರ್ಗ ನಿರ್ಮಾಣಕ್ಕೆ 849 ಕೋಟಿ ರೂ. ನೀಡಲು ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಅನುಮೋದನೆ ನೀಡಲಾಗಿದೆ ಎಂದರು.
ಧಾರವಾಡದ ಮನೆ ಮಗನಾದ ನಾನು ತವರಿಗೆ ಹೂವು ತರುತ್ತೇನೆ ಹೊರತು ಹುಲ್ಲನ್ನಲ್ಲ ಎಂದು ಮಾರ್ಮಿಕವಾಗಿ ಹೇಳಿದ್ರು ಸಿಎಂ ಬೊಮ್ಮಾಯಿಯವರು.