ನಾಳೆ ಜು.24 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ಒಂದು ದಿನ ರಜೆ ನೀಡಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ
ಧಾರವಾಡ
ಧಾರವಾಡ ಧಾರವಾಡ ಜಿಲ್ಲೆ ಆದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ನಾಳೆ ಜುಲೈ 24 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಇಂದು ಸಂಜೆ ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಳೆದ ಎರಡಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಕ್ಕಳ ರಕ್ಷಣೆ ಹಿತದೃಷ್ಟಿಯಿಂದ ನಾಳೆ ಒಂದು ದಿನ ಮಾತ್ರ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಈ ರಜಾ ದಿನವನ್ನು ಮುಂದಿನ ಆಗಸ್ಟ್ 5ರ ಶನಿವಾರದಂದು ಪೂರ್ಣ ದಿನ ವರ್ಗಗಳನ್ನು ನಡೆಸುವ ಮೂಲಕ ಜುಲೈ 24 ರ ರಜೆ ಹೊಂದಾಣಿಕೆ ಮಾಡಿಕೋಳ್ಳಬೇಕು. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಮತ್ತು ಪದವಿ ಕಾಲೇಜುಗಳಿಗೆ ಸಂಭಂದಿಸಿದ ಅಧಿಕಾರಿಗಳು ತಮಗೆ ಸಂಬಂಧಿಸಿದ ಸಂಸ್ಥೆಗಳಿಗೆ ಮಾಹಿತಿ ನೀಡಿ, ಸೂಕ್ತ ಕ್ರಮವಹಿಸಬೇಕೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.