ಬೆಂಗಳೂರುರಾಜಕೀಯರಾಜ್ಯ

ಪ್ರಚೋದನಕಾರಿ ಭಾಷಣಕ್ಕೆ ಸಚಿವ ಮುನಿರತ್ನ ವಿರುದ್ಧ ಪ್ರಕರಣ ದಾಖಲು!

Powercity news/ಬೆಂಗಳೂರು: ಇತ್ತೀಚೆಗೆ ನಡೆದ ಕಾರ್ಯಕ್ರಮ ಒಂದರಲ್ಲಿ ಸಮಾಜದ ಸಾಮರಸ್ಯ ಕದಡುವ ಭಾಷಣ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದಡಿ ಸಚಿವ ಮುನಿರತ್ನ ಅವರ ವಿರುದ್ಧ ಬೆಂಗಳೂರಿನ ಜಾಲಹಳ್ಳಿ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ.

Munirathna

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯೊಬ್ಬರು ನೀಡಿರುವ ದೂರು ಆಧರಿಸಿ ಸಚಿವ ಕೆ.ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ವಿಚಾರಣೆಗಾಗಿ ಶುಕ್ರವಾರ ಬೆಳಿಗ್ಗೆ ಠಾಣೆಗೆ ಹಾಜರಾಗುವಂತೆ ಮುನಿರತ್ನಗೆ ಈಗಾಗಲೆ ನೋಟಿಸ್ ನೀಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

‘ತಮಿಳು ಭಾಷಿಕರು ಮತ್ತು ಕನ್ನಡಿಗರ ಮಧ್ಯೆ ಸಂಘರ್ಷಕ್ಕೆ ಎಡೆ ಮಾಡುವಂಥ ಪ್ರಚೋದನಾಕಾರಿ ಭಾಷಣ ಮಾಡಿರುವ ಮುನಿರತ್ನ, ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದವರನ್ನು ಹೊಡೆದು ಓಡಿಸಿ ಎಂಬುದಾಗಿ ಮಾತನಾಡಿದ್ದಾರೆ.

ಕೋಮುದ್ವೇಷದ ಹೇಳಿಕೆನೀಡಿ ಸಮುದಾಯದ ಗೌರವ ಹಾಗೂ ಹಕ್ಕುಗಳಿಗೆ ಚ್ಯುತಿ ತಂದಿದ್ದಾರೆ’ ಎಂಬುದಾಗಿ ದೂರು ದಾರರು ಆರೋಪಿಸಿದ್ದಾರೆ. ಮುನಿರತ್ನ ಅವರ ಭಾಷಣದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.

ಅದನ್ನೂ ಪುರಾವೆಯಾಗಿ ಪರಿಗಣಿಸಲಾಗಿದೆ. ಮುನಿರತ್ನ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಮೂಲಗಳು ಹೇಳಿವೆ.

Related Articles

Leave a Reply

Your email address will not be published. Required fields are marked *