ಕಾಂಗ್ರೆಸ್ ಸೇರ್ಪಡೆ- ಮಾಜಿ ಸಚಿವ ಮುನೇನಕೊಪ್ಪ ಏನಂದ್ರು…
powercity news:
ಹುಬ್ಬಳ್ಳಿ: ಬಿಜೆಪಿಯಲ್ಲಿ ಕಾರ್ಯಕರ್ತನಾಗಿ ಶಾಸಕನಾಗಿ,ಸಚಿವನಾಗಿಯೂ ಕೂಡ ಸಾರ್ವಜನಿಕರ ಸೇವೆಗೆ ಪಕ್ಷ ಅವಕಾಶ ಮಾಡಿಕೊಟ್ಟಿದೆ. ಹೀಗಿರುವಾಗ ಭಾರತೀಯ ಜನತಾ ಪಕ್ಷ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಪ್ರಶ್ನೇಯೆ ಇಲ್ಲ. ಮುಂಬರುವ ಲೋಕಸಭಾ ಚುನಾವಣೆ ಬಗ್ಗೆಯಾಗಲಿ ವರ್ತಮಾನ ರಾಜಕೀಯ ತೀರ್ಮಾನದ ಬಗ್ಗೆ ನಾನು ನವೆಂಬರ್ ವರೆಗೂ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಸ್ಪಷ್ಟಪಡಿಸಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ನಾನು ಭಾರತೀಯ ಜನತಾ ಪಕ್ಷ ತೊರೆಯುತ್ತೇನೆ ಎಂಬ ವದಂತಿಗಳು ಹಬ್ಬಿವೆ. ಆದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಿಲ್ಲ. ಅಷ್ಟಕ್ಕೂ ಯಾವುದೇ ಕಾಂಗ್ರೆಸ್ ನಾಯಕರು ನನ್ನನ್ನ ಸಂಪರ್ಕಿಸಿಲ್ಲ ಎಂದರು.
ಕಾಂಗ್ರೆಸ್ ಪಕ್ಷದ ನಾಯಕರ ಜೊತೆಗೆ ಮಾತನಾಡಲಾಗಿದೆ ಎಂಬ ಮಾತುಗಳು ಮಾಧ್ಯಮ ಸೇರಿದಂತೆ ಕೇಲವರು ಹೇಳಿದ್ದಾರೆ. ಆದರೆ ಅದು ನಿಜವಲ್ಲ, ನಾನು ಭಾರತೀಯ ಜನತಾ ಪಕ್ಷದದಲ್ಲಿಯೇ ಇರುವೆ ಯಾವುದೇ ರೀತಿಯ ಧಾರವಾಡ ಲೋಕಸಭಾ ಚುನಾವಣೆಗೆ ಆಕಾಂಕ್ಷಿಯು ಸಹ ನಾನಲ್ಲಾ. ಈಗಾಗಲೇ ಧಾರವಾಡ ಜಿಲ್ಲೆಯ ಹಲವು ಮಾಜಿ ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ ಎನ್ನುವ ಚರ್ಚೆಯ ಬೆನ್ನಲ್ಲೇ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಕಾಂಗ್ರೆಸ್ ಸೇರ್ತಾರೆ ಎನ್ನುವ ಗಾಳಿಸುದ್ದಿ ಇತ್ತು ಅದರ ಜೊತೆಗೆ
ಸಚಿವ ಸಂತೋಷ್ ಲಾಡ್ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್ ಹೇಳಿಕೆ ಬೆನ್ನಲ್ಲೇ ರಾಜಕೀಯ ಸಂಚಲನ ಉಂಟು ಸಹ ಮಾಡಿತ್ತು. ಈಗ ಇದಕ್ಕೆ ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅವರೇ ಭಾರತೀಯ ಜನತಾ ಪಕ್ಷಕ್ಕೆ ಬಿಡಲ್ಲ ಎನ್ನುವ ಮೂಲಕ ಎಲ್ಲ ಊಹಾಪೋಹಗಳಿಗೆ ತೆರೆ ಎಳೆಯಲಾಗಿದೆ ಎಂದು ಅವರು ಹೇಳಿದರು.
ಕೇಂದ್ರ ಸಚಿವರು ಈ ಭಾಗದ ಎಂಟು ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವ ಜವಾಬ್ದಾರಿ ನೀಡಬೆಕಿದೆ. ಅಲ್ಲದೇ ಕಾರ್ಯಕರ್ತರ ಅಸಮಾಧಾನ ನಿವಾರಣೆ ಮಾಡುವ ಕಾರ್ಯವನ್ನು ಮಾಡಬೇಕು ಎಂದು ಪರೋಕ್ಷವಾಗಿ ಕೇಂದ್ರ ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿದರು.