ರಾಷ್ರ್ಟೀಯಸ್ಥಳೀಯ ಸುದ್ದಿಹುಬ್ಬಳ್ಳಿ
ವೈದ್ಯರ ಮೇಲೆ ಹಲ್ಲೆ ನಡೆಸಿದರೇ ಕಾನೂನು ಕ್ರಮ: ಕಮೀಷನರೇಟ್ ವಾರ್ನಿಂಗ್
ಹುಬ್ಬಳ್ಳಿ: ವೈದ್ಯರ ಮೇಲೆ ರೋಗಿಗಳ ಸಂಬಂಧಿಕರು ಹಲ್ಲೆ ನಡೆಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಖಡಕ್ ಎಚ್ಚರಿಕೆ ನೀಡಿದೆ.
ಹೌದು.. ರೋಗಿಗಳ ಸಂಬಂಧಿಕರಿಂದ ವೈದ್ಯರ ಮೇಲೆ ನಡೆಯುವ ಹಲ್ಲೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ನಗರದ ಖ್ಯಾತ ಮನೋರೋಗ ತಜ್ಞ ಡಾ. ವಿನೋದ ಕುಲಕರ್ಣಿ ಅವರು (ಪಿಐಎಲ್) ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ವೈದ್ಯರ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿತ್ತು.
ನಗರದ ಕಿಮ್ಸ್ ಸೇರಿ ಎಲ್ಲ ಆಸ್ಪತ್ರೆಗಳಲ್ಲಿ ಪೊಲೀಸ್ ಠಾಣಿಯ ದೂರವಾಣಿ ಸಂಖ್ಯೆ, ಕಂಟ್ರೋಲ್ ರೂಮ್ ನಂಬರ್ ಪ್ರಚುರ ಪಡಿಸುವಂತೆ ನ್ಯಾಯಾಲಯ ಹೇಳಿತ್ತು. ಈ ಹಿನ್ನೆಲೆಯಲ್ಲಿ ಹು-ಧಾ ಪೊಲೀಸ್ ಕಮಿಷನರೇಟ್, ಡಾ. ವಿನೋದ ಕುಲಕರ್ಣಿ ಅವರಿಗೆ ಪತ್ರ ಬರೆದು ತಮಗೆ (ವೈದ್ಯರಿಗೆ) ತೊಂದರೆಯಾದಲ್ಲಿ ದೂರವಾಣಿ ಸಂಖ್ಯೆ ಅಥವಾ ತುರ್ತು ಸಹಾಯವಾಣಿ ಸಂಖ್ಯೆ 112ಗೆ ಕರೆ ಮಾಡಿದರೆ ಐದು ನಿಮಿಷದಲ್ಲಿ ಆಗಮಿಸಿ ರಕ್ಷಣೆ ನೀಡಲಾಗುವುದು’ ಎಂದು ಭರವಸೆ ನೀಡಿದೆ.