ರಾಜಕೀಯರಾಜ್ಯಸ್ಥಳೀಯ ಸುದ್ದಿಹುಬ್ಬಳ್ಳಿ
ಹುಬ್ಬಳ್ಳಿ ನ್ಯಾಯಾಲಯದಲ್ಲಿ ಸಂವಿಧಾನ ದಿನಾಚರಣೆ!
ಹುಬ್ಬಳ್ಳಿ (ಕರ್ನಾಟಕ ವಾರ್ತೆ) ನ.28:
ಇಲ್ಲಿನ ಹೊಸ ನ್ಯಾಯಾಲಯದ ಆವರಣದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಪರಮೇಶ್ವರ ಪ್ರಸನ್ನ ಬಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಧಾನ ಕೌಟುಂಬಿಕ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರಾದ ಸುವರ್ಣ.ಕೆ. ಮಿರ್ಜಿ, 1 ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರಾದ ಇಂದಿರಾ ಚೆಟ್ಟಿಯಾರ್, 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿದ್ದಣ್ಣ ಹಂದ್ರಾಳ, ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ
ಹಾಗೂ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಿನ್ನಣ್ಣವರ್ ಆರ್.ಎಸ್., ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ರಾಜಶೇಖರ ತಿಳಗಂಜಿ, ವಕೀಲರ ಸಂಘದ ಅಧ್ಯಕ್ಷ ಸಿ.ಆರ್. ಪಾಟೀಲ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಅಶೋಕ ಅಣ್ವೇಕರ ಸೇರಿದಂತೆ ವಕೀಲರ ಸಂಘದ ಪದಾಧಿಕಾರಿಗಳು, ವಕೀಲರು ಹಾಗೂ ನ್ಯಾಯಾಂಗ ಇಲಾಖೆಯ ಸಿಬ್ಬಂದಿ ಹಾಜರಿದ್ದರು.